16Mudigere2A

 

 

ಆಶಾ ಕಾರ್ಯಕರ್ತೆಯರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರಿಗೆ ಮನವಿ ಸಲ್ಲಿಸಲಾಯಿತು ಎಂದು ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರೆಹಮಾನ್ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ 1 ವರ್ಷದಿಂದ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ, ಪ್ರೋತ್ಸಾಹಧನ ಸಿಗುತ್ತಿಲ್ಲ.  . ಹಲವಾರು ವರ್ಷದಿಂದ  ಬಾಕಿ ಇರುವ ವಿವಿಧ ಕಂಪೆÇೀನೆಂಟ್‍ಗಳ ಹಣ ಬಿಡುಗಡೆಯಾಗಿಲ್ಲ. ಮತ್ತೊಂದೆಡೆ 9 ವಿವಿಧ ಸೇವೆಗಳನ್ನು ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯೆಗೊಳಿಸಿಸಲಾಗಿದೆ.  ಇದರಿಂದ ಪ್ರತೀ ಕಾರ್ಯಕರ್ತೆಗೆ 500 ರಿಂದ 1000 ರೂ ವರೆಗೆ ಪ್ರೋತ್ಸಾಹಧನ ಕಡಿತವಾಗಲಿದೆ. ಈ ಕೆಲಸಗಳನ್ನು ಕಾರ್ಯಕರ್ತೆಯರು ಹಲವಾರು ವರ್ಷಗಳಿಂದ ಮಾಡುತ್ತಿದ್ದು, ಇದರಿಂದ ತಾಯಿ ಮಗು ಸುರಕ್ಷತೆಗೆ, ಬಡ ಜನತೆಯ ಆರೋಗ್ಯಕ್ಕೆ ಅತ್ಯಂತ ಅಗತ್ಯವಾಗಿತ್ತು. ಈಗ ಕಾರ್ಯಕರ್ತೆಯರು ಈ ಸೇವೆ ಮಾಡದಿದ್ದರೆ ಇದರ ಪರಿಣಾಮ ಜನರು ಅನುಭವಿಸುವಂತಾಗುತ್ತದೆ.

ಕಳೆದ ವರ್ಷ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರಕಾರದ ಪ್ರೋತ್ಸಾಹಧನ ಹಾಗೂ ರಾಜ್ಯ ಸರಕಾರದ ಗೌರವಧನ ಒಟ್ಟಿಗೆ ಸೇರಿಸಿ ಕನಿಷ್ಟ ಮಾಸಿಕ ರೂ.10,000 ಗೌರವಧನ ನೀಡುವ ಭರವಸೆ ನೀಡಿದ್ದರು. ಆದರೆ ಕಾರ್ಯರೂಪಕ್ಕೆ ತಂದಿರಲಿಲ್ಲ. ಹಾಗಾಗಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಜೂ.14ರಂದು ಸಚಿವ ಯು.ಟಿ.ಖಾದರ್ ಅವರನ್ನು ಮಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಅವರು ಶೀಘ್ರದಲ್ಲೇ ಸಭೆ ನಡೆಸಿ  ಸಮಸ್ಯೆ ಬಗೆಹರಿಸುವ ಬಗ್ಗೆ ಭರವಸೆ  ನೀಡಿದ್ದಾರೆಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ