apsar

 

 

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಸಮಿತಿಯ ಮಧ್ಯಂತರ ಜಿಲ್ಲಾ ಪ್ರತಿನಿಧಿ ಸಭೆಯು ಚಿಕ್ಕಮಗಳೂರಿನ ಜೈಜಾಸ್ ಕನ್ವೆನ್ಷನ್ ಹಾಲ್ ನಲ್ಲಿ ಜಿಲ್ಲಾಧ್ಯಕ್ಷರಾದ ಮುಸ್ತಫ ಆಲ್ದೂರು ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ SDPI ರಾಜ್ಯ ಕಾರ್ಯದರ್ಶಿ ಅಫ್ಸರ್ ಕೆ.ಆರ್ ನಗರ ರವರು S.I.R ಪ್ರಕ್ರಿಯೆಯ ಸರಿಯಾದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಎಂದರೆ ಏನೆಂದು ಎಲ್ಲಾರೂ ತಿಳಿದುಕೊಳ್ಳಬೇಕಾಗಿದೆ, ಎನ್ಯೂಮರೇಶನ್ ಫಾರ್ಮ್ ಭರ್ತಿ ಪ್ರಕ್ರಿಯೆ ಕುರಿತು ಜನರಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವುದು ಅತ್ಯಗತವಾಗಿದ್ದು, ಯಾವುದೇ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕಿದೆ, ಸಂವಿಧಾನ ಬಧ್ಧ ಹಕ್ಕುಗಳ ರಕ್ಷಣೆಗಾಗಿ ಮನೆ ಮನೆಗೆ ತೆರಳಿ ಈ ಪ್ರಕ್ರಿಯೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, SIR ಕುರಿತು ಜನರಿಗೆ ಸರಿಯಾದ ಮಾಹಿತಿ ತಲುಪಿಸುವ ಜವಾಬ್ದಾರಿ ಪಕ್ಷದ ಕಾರ್ಯಕರ್ತರು ಮಾಡಬೇಕಾಗಿದೆ ಎಂದು ಹೇಳಿದರು.

ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು ರವರು ಸಮಕಾಲಿನ ರಾಜಕೀಯ ಪರಿಸ್ಥಿತಿ, ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆ ಹಾಗೂ ಜನಪರ ಹೋರಾಟಗಳ ಅಗತ್ಯತೆಯ ಕುರಿತು ಮಾತನಾಡಿದರು.

ರಾಜ್ಯ ಸಮಿತಿ ಸದಸ್ಯರಾದ ಅಬ್ರಾರ್ ಅಹಮದ್ ರವರು ಮಾತನಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ತಿಳಿಸಿ ಮುಂಬರಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈಗಿಂದಲೇ ಸಿಧ್ಧತೆ ನಡೆಸಿ, ಪಕ್ಷದ ಅಭ್ಯರ್ಥಿಗಳು ಜಯಗಳಿಸಲು ಕಾರ್ಯತಂತ್ರ ರೂಪಿಸಬೇಕೆಂದು ತಿಳಿಸಿದರು.

ಜಿಲ್ಲಾಧ್ಯಕ್ಷರಾದ ಮುಸ್ತಫ ಆಲ್ದೂರು ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಜ್ವಾನ್ ಹುಸೇನ್, ಜಿಲ್ಲಾ ಕೋಶಾಧಿಕಾರಿ ಮೊಹಮ್ಮದ್ ಅಲಿ ರವರು ಪಕ್ಷದ ಮಧ್ಯಂತರ ವರದಿಯನ್ನು ಮಂಡಿಸಿದರು.

ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಸಾಮಾಜಿಕ, ರಾಜಕೀಯ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಹಲವು ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮುಬಾರಕ್, ಜಿಲ್ಲಾ ಕಾರ್ಯದರ್ಶಿ ಅಜ್ನಾನ್ ಶರೀಫ್, ಜಿಲ್ಲಾ ಸಮಿತಿ ಸದಸ್ಯರಾದ ಖಾಲಿದ್, ಸಿಕಂದರ್, ಹಾಫಿಜ್ ಮೊಹ್ಸೀನ್, ವುಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾ ಉಪಾಧ್ಯಕ್ಷೆ ಆಶಾ ಸಂತೋಷ್, ಚಿಕ್ಕಮಗಳೂರು ವಿಧಾನಸಭಾ ಅಧ್ಯಕ್ಷರಾದ ಅಝ್ಮತ್ ಪಾಷ, ಮೂಡಿಗೆರೆ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಶರೀಫ್ ಎಂ.ಯು ಸೇರಿದಂತೆ ವಿವಿಧ ವಿಧಾನಸಭಾ ಕ್ಷೇತ್ರ ಸಮಿತಿಯ ಪದಾಧಿಕಾರಿಗಳು, ವಿಮ್ ನ ನಾಯಕಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ