barath_page-0001

 

 

ಮೂಡಿಗೆರೆ ತಾಲೂಕು ಗೋಣಿಬೀಡು ಹೋಬಳಿ ಕನ್ನೇಹಳ್ಳಿ ಗ್ರಾಮದ ಬಿಜೆಪಿ ಯುವ ಮುಖಂಡ ಭರತ್ ಕನ್ನೇಹಳ್ಳಿ(54 ವರ್ಷ) ಇವರು ಅಕಾಲಿಕವಾಗಿ ನಿಧನರಾಗಿದ್ದಾರೆ

ಭರತ್ ಅವರಿಗೆ ಈಗ್ಗೆ ಕೆಲ ದಿನಗಳ ಹಿಂದೆ ತೋಟದಲ್ಲಿ ಇದ್ದಾಗ ಕಾಲಿಗೆ ವಿಷಕಾರಿ ನೊಣ (ಕಡಜ) ಕಚ್ಚಿತ್ತು ಎನ್ನಲಾಗಿದೆ.

ಅದಕ್ಕೆ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ, ಇತ್ತೀಚೆಗೆ ಗಾಯ ಉಲ್ಬಣವಾಗಿತ್ತು, ಕಡಜ ಕಚ್ಚಿದ ಗಾಯವು ಕಾಲಿನಿಂದ ದೇಹಕ್ಕೆ ಪಸರಿಸಿತ್ತು ಎನ್ನಲಾಗಿದೆ.

ಕೆಲ ದಿನಗಳ ಹಿಂದೆ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ  ಇಂದು ಭಾನುವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ  ಎಂದು ತಿಳಿದುಬಂದಿದೆ.

ಭರತ್ ಮೂಲತಃ ಮೂಡಿಗೆರೆ ತಾಲ್ಲೂಕು ಹಂತೂರು ಗ್ರಾಮದವರು. ದಿವಂಗತ ಕೃಷ್ಣೇಗೌಡ ಶ್ರೀಮತಿ ಕಮಲಮ್ಮ ದಂಪತಿಗಳ ಪುತ್ರ.

ಭರತ್ ಅವರು ಮೂಡಿಗೆರೆ ತಾಲೂಕು ಗೋಣಿಬೀಡು ಮಂಡಲ ಬಿಜೆಪಿ ಮಾಜಿ ಅಧ್ಯಕ್ಷರಾಗಿದ್ದರು. ವಿಶ್ವ ಹಿಂದೂ ಪರಿಷತ್, ಬಜರಂಗದಳ ಮುಂತಾದ ಹಿಂದೂಪರ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.

ಮೂಡಿಗೆರೆ ಸಾರ್ವಜನಿಕ ಮಹಾಗಣಪತಿ ಸೇವಾ ಸಮಿತಿಯ ಉಪಾಧ್ಯಕ್ಷ, ಕಾರ್ಯದರ್ಶಿ , ಪದಾಧಿಕಾರಿ ಹುದ್ದೆಗಳಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು,

ಅನೇಕ ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಲ್ಲಿ ಇವರು ತಮ್ಮನ್ನು ತೊಡಗಿಸಿಕೊಂಡಿದ್ದರು. ಸ್ನೇಹಜೀವಿಯಾಗಿದ್ದರು ಮತ್ತು ಅಪಾರ ಸ್ನೇಹ ಬಳಗವನ್ನು ಹೊಂದಿದ್ದರು .

ಭರತ್ ಅವರು ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಭರತ್ ಅವರ ಅಕಾಲಿಕ ನಿಧನ ಅವರ ಸ್ನೇಹ ವಲಯ ಮತ್ತು ಕುಟುಂಬ ವಲಯದಲ್ಲಿ ಆಘಾತವನ್ನು ಉಂಟು ಮಾಡಿದೆ.

ಮೃತರ ಪಾರ್ಥೀವ ಶರೀರವನ್ನು ಇಂದು ಭಾನುವಾರ ಸಂಜೆ 3 ಗಂಟೆಯ ನಂತರ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತಿದೆ., ನಂತರ ಸ್ವಗ್ರಾಮ ಕನ್ನೇಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ