suddi-9 (6)

 

 

ಕರ್ನಾಟಕದ ವಿವಿಧ ಸಾರ್ವಜನಿಕ ವಿದ್ಯುತ್ ವಿತರಣಾ ಕಂಪನಿಗಳ ವ್ಯಾಪ್ತಿಯ 19 ಕಂದಾಯ ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಪರವಾನಿಗೆ ಕೋರಿ ದಿ ಟಾಟಾ ಪವರ್ ಕಂಪನಿ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿ ಮೂಡಿಗೆರೆ ಕೆಪಿಟಿಸಿ ಎಂಪ್ಲಾಯಿಸ್ ಯೂನಿಯನ್ ಹಾಗೂ ಅಧಿಕಾರಿಗಳು ಹಾಗೂ ವಿದ್ಯುತ್ ಗುತ್ತಿಗೆದಾರರು ಮೂಡಿಗೆರೆ ಮೆಸ್ಕಾಂ ಕಚೇರಿಯ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಮಿಕ ಮುಖಂಡರಾದ ಶ್ರೀ ಸುನಿಲ್, ವಿದ್ಯುತ್ ಕಾಯ್ದೆ 2003ರ ಕಲಂ 14(6)ರ ಅಡಿಯಲ್ಲಿ ಟಾಟಾ ಪವರ್ ಸಲ್ಲಿಸಿರುವ ಅರ್ಜಿಯು ಅಪೂರ್ಣವಾಗಿದ್ದು, ಸಮಾನಾಂತರ ವಿದ್ಯುತ್ ವಿತರಣೆಗೆ ಅಗತ್ಯವಿರುವ ವಿದ್ಯುತ್ ಮೂಲ, ಖರೀದಿ ಮತ್ತು ಉತ್ಪಾದನಾ ವೆಚ್ಚ, ಮೂಲಸೌಕರ್ಯ ನಿರ್ಮಾಣ, ಬಂಡವಾಳ ಹೂಡಿಕೆ, ತಾಂತ್ರಿಕ ಯೋಜನೆ ಹಾಗೂ ಸಿಬ್ಬಂದಿ ನೇಮಕಾತಿ ಕುರಿತ ಸಮಗ್ರ ಮಾಹಿತಿಯನ್ನು ಒದಗಿಸಿಲ್ಲ ಎಂದು ಆರೋಪಿಸಿದರು.

ಮತ್ತೊಬ್ಬ ಮುಖಂಡ ಧ್ರುವ ಮಾತನಾಡಿ. ರಾಜ್ಯದ ಬೆಸ್ಕಾಂ, ಚೆಸ್ಕಾಂ, ಮೆಸ್ಕಾಂ, ಹೆಸ್ಕಾಂ ಹಾಗೂ ಜೆಸ್ಕಾಂ ವ್ಯಾಪ್ತಿಯ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಹಾಸನ, ಚಾಮರಾಜನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ಬಳ್ಳಾರಿ, ರಾಯಚೂರು, ಕಲಬುರಗಿ ಹಾಗೂ ಯಾದಗಿರಿ ಸೇರಿದಂತೆ 19 ಜಿಲ್ಲೆಗಳಲ್ಲಿ ಈಗಿರುವ ಸಾರ್ವಜನಿಕ ವಿದ್ಯುತ್ ವಿತರಣಾ ಕಂಪನಿಗಳಿಗೆ ಸಮಾನಾಂತರವಾಗಿ ಖಾಸಗಿ ಕಂಪನಿಗೆ ಪರವಾನಿಗೆ ನೀಡುವುದು ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ದಾರಿ ಮಾಡಿಕೊಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಸಾಂಕೇತಿಕ ಪ್ರತಿಭಟನೆಯಲ್ಲಿ ್ಲ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜಿತೇಂದ್ರ ಕುಮಾರ್ ಹಾಗೂ ಕಾರ್ಯದರ್ಶಿಯಾದ ಕಿರಣ್ ರವರು ಹಾಗೂ ಶಾಖಾಧಿಕಾರಿಗಳಾದ ರವಿಕುಮಾರ್, ಷಣ್ಮುಖ, ಮಂಜುನಾಥ್, ಜಾವೇದ್ ಮತ್ತು ವಿದ್ಯುತ್ ಗುತ್ತಿಗೆದಾರರಾದ ಪಾಂಡುರವರು ವಿನ್ಸಿ, ಉಮೇಶ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ