ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ಮಾಡುವಾಗ ವಿದ್ಯುತ್ ಶಾಕ್‌ನಿಂದ ಅರಣ್ಯ ಇಲಾಖೆ ಆರ್‌ಎಫ್‌ಓ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ನಡೆದಿದೆ.
ಜಗದೀಶ್.ಪಿ (46) ಮೃತಪಟ್ಟ ಅರಣ್ಯಾಧಿಕಾರಿ. ಕುಣಿಗಲ್‌ನಲ್ಲಿ ಅವರು ಆರ್.ಎಫ್.ಓ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಹಾಸನ ಸತ್ಯಮಂಗಲ ಬಡಾವಣೆಯಲ್ಲಿ ನೂತನ ಮನೆ ನಿರ್ಮಿಸುತ್ತಿದ್ದರು. ಜೂನ್ 21 ರಂದು ಭಾನುವಾರ ಮನೆಯ ಗೋಡೆಗೆ ನೀರು ಹಾಕಿ ಕ್ಯೂರಿಂಗ್ ಮಾಡುವ ವೇಳೆ ಆಕಸ್ಮಿಕ ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜಗದೀಶ್ ಅವರು ಹಾಸನ ಮೂಲದವರಾಗಿದ್ದು, 2015 ರಿಂದ 2020 ರವರೆಗೆ ಹಾಸನ ಜಿಲ್ಲೆಯಲ್ಲಿ ಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸಿದ್ದರು. ಜಗದೀಶ್.ಪಿ ಸಾವಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.



