24ktg1

 

 

ಪರಿಸರ ಸಮತೋಲನದಲ್ಲಿ ಮಳೆಕಾಡುಗಳ ಪಾತ್ರ ಹೊಂದಿದ್ದು ಮಳೆಕಾಡುಗಳ ಸಂರಕ್ಷಣೆ ನಮ್ಮೆಲರ ಹೊಣೆಯಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಬೋರಯ್ಯ ಹೇಳಿದರು.

ಅರಣ್ಯ ಇಲಾಖೆ ವತಿಯಿಂದ ಕೊಟ್ಟಿಗೆಹಾರದ ಕೆ.ಪಿಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನಡೆದ ವಿಶ್ವ ಮಳೆಕಾಡುಗಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅತಿಯಾದ ಮಾನವನ ಹಸ್ತಕ್ಷೇಪ ಹಾಗೂ ಕೈಗಾರೀಕರಣ, ಅಕ್ರಮ ಮರ ಕಡಿತಲೆ ಇತ್ಯಾದಿ ಕಾರಣಗಳಿಂದಾಗಿ ಮಳೆಕಾಡುಗಳು ಅಪಾಯದ ಅಂಚಿನಲ್ಲಿವೆ. ಪಶ್ಚಿಮಘಟ್ಟಗಳ ಸಾಲಿನಲ್ಲಿರುವ ಮಳೆಕಾಡುಗಳ ಸಂರಕ್ಷಣೆಗೆ ಎಲ್ಲರೂ ಅರಣ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು ಎಂದರು.

ಮೂಡಿಗೆರೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆಕರ್ಷ್ ಟಿ.ಎಂ ಮಾತನಾಡಿ, ಮಳೆ ಕಾಡುಗಳ ಸಂರಕ್ಷಣೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಬೇಕಿದೆ. ಮಳೆಕಾಡುಗಳ ಸಂರಕ್ಷಣೆ ಹಾಗೂ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ಮುತ್ತೋಡಿ ವಲಯದ ಉಪ ವಲಯ ಅರಣ್ಯಾಧಿಕಾರಿಗಳಾದ ಕುಮಾರ್ ಬಿ ಮಾತನಾಡಿ ಭೂಮಿಯ ಹವಾಮಾನ ನಿಯಂತ್ರಣ, ಆಮ್ಲಜನಕ ಉತ್ಪಾದನೆ ಮತ್ತು ಜೀವವೈವಿಧ್ಯತೆಯ ಸಂರಕ್ಷಣೆಗೆ ಮಳೆಕಾಡುಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಮಳೆ ಕಾಡುಗಳ ಸಂರಕ್ಷಣೆ ಕುರಿತ ಜಾಗೃತಿಗೆ ಮಳೆಕಾಡು ಗಳ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ಎಟಿಡಬ್ಲ್ಯೂಎಎಸ್ ಸಂಸ್ಥೆಯ ರಿಂಕಲ್ ಲೋಬೊ ಮಾತನಾಡಿ, ವನ್ಯಜೀವಿಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸುವುದು, ಜೀವವೈವಿಧ್ಯತೆಯನ್ನು ಕಾಪಾಡುವುದು ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿ ಸಸ್ಯಗಳನ್ನು ಉಳಿಸುವುದು ಎಲ್ಲರ ಆದ್ಯತೆ ಆಗಬೇಕು ಎಂದರು.

ಬಣಕಲ್ ಉಪ ವಲಯ ಅರಣ್ಯಾಧಿಕಾದಿ ರಂಜಿತ್ ಪ್ರಾಸ್ತಾವಿಕ ನುಡಿಗಳನಾಡಿದರು. ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಮಂಜುನಾಥ್, ತರುವೆ ಏಕಲವ್ಯ ಮಾದರಿ ವಸತಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಅರಣ್ಯ ಇಲಾಖೆ ಸಿಬ್ಬಂದಿಗಳು ಇದ್ದರು. ಎ.ವಿ ಮನು ಸ್ವಾಗತಿಸಿ, ಆದರ್ಶ್ ವಿ.ಎಸ್ ನಿರೂಪಿಸಿದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ