baluru

 

 

ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕಾಫಿ ಎಸ್ಟೇಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಯುವಕನ ವಿರುದ್ಧ ಅಪ್ರಾಪ್ತ ವಯಸ್ಕ ಬಾಲಕಿಯ ಅಪಹರಣ, ಅತ್ಯಾಚಾರ, ಮತಾಂತರ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

‎ಮಧ್ಯಪ್ರದೇಶ ಮೂಲದ ಅಪ್ರಾಪ್ತ ವಯಸ್ಕ ಬಾಲಕಿಯ ತಾಯಿ ನೀಡಿದ ದೂರಿನನ್ವಯ ಅಸ್ಸಾಂ ಮೂಲದ ಹಬೀವ‌ರ್ ಇಸ್ಲಾಂ ವಿರುದ್ಧ ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‎ಎಸ್ಟೇಟ್ ನಲ್ಲಿ ಕೆಲಸಕ್ಕೆಂದು ಬಂದಿರುವ ಮಧ್ಯಪ್ರದೇಶದ ಗುನಾ ಮೂಲದ ಹಿಂದೂ ದಂಪತಿಯ ನಾಲ್ವರು ಮಕ್ಕಳ ಪೈಕಿ ಕೊನೆಯವಳಾದ 15 ವರ್ಷದ ಬಾಲಕಿಯನ್ನ ಹಬೀವರ್‌ ಇಸ್ಲಾಂ ಪ್ರೀತಿಯ ನಾಟಕವಾಡಿ ಪುಸಲಾಯಿಸಿ ಅಸ್ಸಾಂಗೆ ಕರೆದೊಯ್ದು ಮತಾಂತರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಮೇರೆಗೆ ಬಾಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಮೋದ್ ಮುತಾಲಿಕ್ ಭೇಟಿ ; ಕಠಿಣ ಕ್ರಮಕ್ಕೆ ಆಗ್ರಹ, ಆರೋಪಿ ಪರ ವಕಾಲತ್ತು ವಹಿಸದಂತೆ ವಕೀಲರಿಗೆ ಆಗ್ರಹ

ಘಟನೆಯ ಸಂಬಂಧ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಬಾಳೂರಿಗೆ ಭೇಟಿ ನೀಡಿ ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಜೊತೆಗೆ ಬಾಳೂರು ಠಾಣೆಗೆ ಭೇಟಿ ನೀಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಆಗ್ರಹಿಸಿದ್ದಾರೆ. ನಂತರ ಮೂಡಿಗೆರೆಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ ; 15 ವರ್ಷದ ಬಾಲಕಿಯನ್ನ ಕರೆದೊಯ್ದು ಗೋಮಾಂಸ ತಿನ್ನಿಸಿ, ಮತಾಂತರ ಮಾಡಿ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿ ಮದುವೆ ಮಾಡಿಸಿದ್ದಾರೆ. ಆರೋಪಿ ಪರ ಯಾವ ವಕೀಲರು ವಕಾಲತ್ತು ಹಾಕಬಾರದು, ಜಾಮೀನು ಕೊಡಬಾರದು. ಆತ ಜೈಲಿನಲ್ಲೇ ಬಿದ್ದು, ಕೊಳೆತು ಸಾಯಬೇಕು.ಯಾವ ವಕೀಲರಿಗೂ ಜಾಮೀನು ಕೊಡಿಸಲು ಮುಂದೆ ಬರಲು ನಾವು ಬಿಡುವುದಿಲ್ಲ. ನಿಮ್ಮ ಮನೆ ಮಕ್ಕಳಿಗೆ ಹೀಗೆ ಆಗಿದ್ದರೆ ಜಾಮೀನು ಕೊಡಿಸುತ್ತಿದರೆ ವಕೀಲರೇ ಎಂದು ನಾನು ಕೇಳುತ್ತನೆ” ಎಂದು ಎಚ್ಚರಿಕೆ ನೀಡಿದರು.

ಮಲೆನಾಡಲ್ಲಿ ಲವ್‌ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು,ವಲಸೆ ಕಾರ್ಮಿಕರ ಕುರಿತು ಸರ್ಕಾರ ಮತ್ತು ಪೊಲೀಸರು ಹೆಚ್ಚಿನ ನಿಗಾ ವಹಿಸಬೇಕು.ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ಶಿಕ್ಷೆಯಾಗಬೇಕು. ಅಕ್ರಮ ನಿವಾಸಿಗಳನ್ನು ಜಿಲ್ಲೆಯಿಂದ ಓಡಿಸಬೇಕು.ನ್ಯಾಯ ಸಿಗದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ