ಚಿಕ್ಕಮಗಳೂರು ಜಿಲ್ಲಾ ಕಾಫಿ ಬೆಳೆಗಾರರ ಸಂಘ ಹಾಗೂ ಟೆಂಡರ್ ಟುಡೆ ಗ್ರೂಪ್ ಸಹಯೋಗದಲ್ಲಿ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಸೆ.18 ಮತ್ತು 19 ರಂದು ಇದೇ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ತಾಂತ್ರಿಕ ಸಮಾವೇಶ ಹಾಗೂ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ ಎಂದು ಟೆಂಡರ್ ಟುಡೆ ಗ್ರೂಪ್‌ನ ಅಧ್ಯಕ್ಷ ಶ್ರೀಹರಿ ಎನ್. ಗೌರಿಪುರ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಕರೆದಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆಂದರು.
ಸುಮಾರು 80ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು ಇತ್ತೀಚೆಗೆ ಆವಿಷ್ಕಾರವಾದ ತಾಂತ್ರಿಕ ಉತ್ಪನ್ನಗಳ ಪ್ರಾತ್ಯಕ್ಷಿಕೆ ಯನ್ನು ನೀಡಲಾಗುವುದು. ಮಡಿಕೇರಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಕಾಫಿ ಬೆಳೆಗಾರರ ಸಂಘಗಳ ಸಹಯೋಗವೂ ಇದ್ದು, ಇತ್ತೀಚೆಗೆ ಕಾಫಿ ಬೆಳೆಗಾರರು ಎದುರಿಸುತ್ತಿರುವ ಕಾರ್ಮಿಕರ ಕೊರತೆ ನೀಗಿಸಲು ಅದಕ್ಕೆ ಪೂರಕವಾದ ಯಂತ್ರೋಪಕರಣಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.
ಚಿಕ್ಕಮಗಳೂರು ಜಿಲ್ಲಾ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಯು. ರತೀಶ್ ಕುಮಾರ್ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಕೆರೆಮಕಿ ಮಹೇಶ್ ಉಪಸ್ಥಿತರಿದ್ದರು



