suddi-9 (8)

 

 

ರಾಗಿ, ಮುಸುಕಿನ ಜೋಳ, ತೊಗರಿ, ಸೂರ್ಯಕಾಂತಿ, ನೆಲಗಡಲೆ, ಹುರುಳಿ ಮತ್ತು ತೃಣಧಾನ್ಯಗಳನ್ನು ಬೆಳೆಯುವಂತೆ ಹಾಗೂ ಸಾವಯವ, ಜೈವಿಕ ಮತ್ತು ಹಸಿರೆಲೆ ಗೊಬ್ಬರಗಳನ್ನು ಹೆಚ್ಚು ಹೆಚ್ಚು ಬಳಸುವ ಮೂಲಕ ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಮತ್ತು ಅವುಗಳ ಮೇಲೆ ಇರುವ ಒತ್ತಡವನ್ನು ಕಡಿಮೆ ಮಾಡುವಂತೆ ನೆರೆದಿದ್ದ ರೈತರಿಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸಲಹೆ ನೀಡಿದರು.

ಪರ್ಯಾಯ ಬೆಳೆ ಪದ್ದತಿ ಮತ್ತು ಸಾವಯವ ಗೊಬ್ಬರಗಳ ಬಳಕೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರೈತ ಸಂಘಗಳ ಪ್ರತಿನಿಧಿಗಳು, ಕೃಷಿಕ ಸಮಾಜದ ಪದಾಧಿಕಾರಿಗಳು, ಬೆಳೆಗಾರರ ಸಂಘದ ಪ್ರತಿನಿಧಿಗಳು, ಪ್ರಗತಿ ಪರ ರೈತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಜಿಲ್ಲೆಯಲ್ಲಿ ಅಳವಡಿಸಿರುವ ಎಲ್ಲ ಮಳೆ ಮಾಪನ ಕೇಂದ್ರಗಳನ್ನು ಸುಸ್ಥಿತಿಯಲ್ಲಿರಿಸಿ ನಿರ್ವಹಿಸುವಂತೆ ಕೆಎಸ್‍ಎನ್‍ಡಿಎಂಸಿಗೆ ಸೂಚಿಸುವುದಾಗಿ ತಿಳಿಸಿದರಲ್ಲದೆ, ರಸಗೊಬ್ಬರಗಳ ನಿರ್ವಹಣೆಯಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಕೃಷಿ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ರೈತರು ಖಾಸಗಿ ಮಳಿಗೆಗಳಿಂದ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಖರೀದಿಸುವಾಗ ಕಡ್ಡಾಯವಾಗಿ ರಶೀದಿಗಳನ್ನು ಕೇಳಿ ಪಡೆಯುವಂತೆ ತಿಳಿಸಿದರು. ಕೃಷಿ ಇಲಾಖೆ ಮತ್ತು ಕೃಷಿ ವಿಜ್ಞಾನಿಗಳು ಗ್ರಾಮೀಣ ಭಾಗದಲ್ಲಿ ಹೆಚ್ಚು ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು  ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದರು.

ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಮಾತನಾಡಿ, ರೈತರು ಸಾರಜನಕ ಹಾಗೂ ರಂಜಕದ ಪೋಷಕಾಂಶಗಳಿಗಾಗಿ ಕೇವಲ ಯೂರಿಯಾ ಮತ್ತು ಡಿಎಪಿ ಗೊಬ್ಬರಗಳ ಮೇಲೆ ಅವಲಂಬಿತರಾಗದೆ, ಹಸಿರೆಲೆ ಗೊಬ್ಬರ, ಕೊಟ್ಟಿಗೆ ಗೊಬ್ಬರ, ಎರೆಹುಳ ಗೊಬ್ಬರ, ಜೀವಾಮೃತ, ಬೀಜಾಮೃತ, ಜೈವಿಕ ಗೊಬ್ಬರ, ಕಾಂಪೋಸ್ಟ್ ಗೊಬ್ಬರ ಮುಂತಾದ ಸಾವಯವ ಗೊಬ್ಬರಗಳನ್ನು ಬಳಸುವಂತೆ ಸಲಹೆ ನೀಡಿದರು.

ಜಂಟಿ ಕೃಷಿ ನಿರ್ದೇಶಕ ಡಾ.ಎಂ.ತಿರುಮಲೇಶ ಮಾತನಾಡಿ, ಪ್ರಸ್ತುತ ಜಿಲ್ಲೆಯಲ್ಲಿ ರಸಗೊಬ್ಬರಗಳಿಗೆ ಯಾವುದೇ ಕೊರತೆ ಇರುವುದಿಲ್ಲವಾದರೂ ಮಧ್ಯ ಪ್ರಾಚ್ಯ ರಾಷ್ಟ್ರಗಳ ಯುದ್ದದ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಯೂರಿಯಾ ಮತ್ತು ಡಿಎಪಿ ಲಭ್ಯತೆಯಲ್ಲಿ ವ್ಯತ್ಯಯವಾದರೆ ರೈತರು ಆತಂಕಪಡದೆ ವಿವಿಧ ಪ್ರಮಾಣದಲ್ಲಿ ಸಾರಜನಕ ಮತ್ತು ರಂಜಕ ಪೋಷಕಾಂಶಗಳನ್ನು ಒದಗಿಸುವ 15:15:15, 17:17:17, 19:19:19 10:26:26 ಮುಂತಾದ ಸಂಯುಕ್ತ (ಕಾಂಪ್ಲೆಕ್ಸ್) ರಸಗೊಬ್ಬರಗಳನ್ನು ಬಳಸುವಂತೆ ರೈತರಲ್ಲಿ ಮನವಿ ಮಾಡಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ