Venezuela

 

 

ದಕ್ಷಿಣ ಅಮೇರಿಕಾ ದೇಶ ವೆನೆಜುವೆಲಾದಲ್ಲಿ ಸಂಭವಿಸಿದ ಪ್ರಬಲ ಅವಳಿ ಭೂಕಂಪ ದೇಶವನ್ನೇ ನಲುಗಿಸಿದೆ. ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣ ಕ್ಷಣಕ್ಕು ಏರುತ್ತಲೇ ಇದೆ. ಭೂಕಂಪದಲ್ಲಿ ಸಾವಿರಾರು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಲಕ್ಷಾಂತರ ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಜೂನ್ 24ರಂದು ವೆನೆಜುವೆಲಾದ ಕೆರಿಬಿಯನ್ ಕರಾವಳಿ ಸಮೀಪ 7.2 ಮತ್ತು 7.5 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿದ್ದವು. ಈ ಭೂಕಂಪದಿಂದ ಹಲವು ಕಟ್ಟಡಗಳು ಕುಸಿದಿದ್ದು, ವ್ಯಾಪಕ ಹಾನಿಯಾಗಿದೆ. ಭೂಕಂಪದಿಂದ ವೆನೆಜುವೆಲಾದ ಪ್ರಮುಖ ವಿಮಾನ ನಿಲ್ದಾಣಕ್ಕೂ ಹಾನಿಯಾಗಿದೆ. ಇದರಿಂದ ಪರಿಹಾರ ಸಾಮಗ್ರಿಗಳು ಮತ್ತು ರಕ್ಷಣಾ ಸಿಬ್ಬಂದಿ ತಲುಪಿಸಲು ತೊಂದರೆ ಉಂಟಾಗಿದೆ.

ರಾಜಧಾನಿ ಕರಾಕಾಸ್‌ನಲ್ಲೂ ಜನರು ಭೂಕಂಪದ ಆತಂಕದಿಂದ ಮನೆಗಳನ್ನು ಬಿಟ್ಟು ರಸ್ತೆ ಹಾಗೂ ಕಾರುಗಳಲ್ಲೇ ರಾತ್ರಿ ಕಳೆದಿದ್ದಾರೆ. ಈ ಕಂಪನದ ಪರಿಣಾಮ ನೆರೆಯ ಕೊಲಂಬಿಯಾ ಮತ್ತು ಬ್ರೆಜಿಲ್‌ನ ಕೆಲವು ಪ್ರದೇಶಗಳಲ್ಲೂ ಕಂಡುಬಂದಿದೆ.

ವೆನೆಜುವೆಲಾದಲ್ಲಿ ಕಳೆದ 126 ವರ್ಷಗಳಲ್ಲೇ ಇದು ಅತಿ ಪ್ರಬಲ ಭೂಕಂಪ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 1900ರ ಬಳಿಕ ಇಷ್ಟು ತೀವ್ರ ಭೂಕಂಪ ದೇಶದಲ್ಲಿ ದಾಖಲಾಗಿರಲಿಲ್ಲ. 1997ರಲ್ಲಿ ಸಂಭವಿಸಿದ್ದ 6.9 ತೀವ್ರತೆಯ ಭೂಕಂಪದಲ್ಲಿ 73 ಮಂದಿ ಮೃತಪಟ್ಟಿದ್ದರು.

ದೊಡ್ಡ ದೊಡ್ಡ ಕಟ್ಟಡಗಳೇ ನೆಲಕ್ಕುರುಳಿದ್ದು, ಸತ್ತವರ ಲೆಕ್ಕ ಹೇಳಲು ಸಂಬಂಧಿಕರು ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಸಾವಿನ ಸಂಖ್ಯೆ ನಿಖರವಾಗಿ ಅಂದಾಜು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ