IMG-20260624-WA0176

 

 

ಮೂಡಿಗೆರೆ ತಾಲೂಕಿನ ಜಾವಳಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಜಾವಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರದೀಪ್ ಎಂ.ಪಿ. ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದುಗ್ಗಮ್ಮ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ವಲಯ ಮೇಲ್ವಿಚಾರಕ ದೀಪಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಯೋಜನೆಯ ವಿವಿಧ ಜನಪರ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಉಡುಪಿ ಪ್ರಸಾದ್ ನೇತ್ರಾಲಯದ ವೈದ್ಯಾಧಿಕಾರಿ ಡಾ. ಪ್ರೇಮ್ ಅವರು ಕಣ್ಣಿನ ಆರೈಕೆಯ ಮಹತ್ವ ಹಾಗೂ ನೇತ್ರ ತಪಾಸಣೆಯ ಅಗತ್ಯತೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರದೀಪ್ ಎಂ.ಪಿ. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಭಾಗದಲ್ಲಿ ಹಮ್ಮಿಕೊಳ್ಳುತ್ತಿರುವ ಆರೋಗ್ಯ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಮೆಚ್ಚಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷೆ ಅಪ್ಪಿ, ಕಾರ್ಯದರ್ಶಿ ಕೃಷ್ಣ ಟೈಲರ್, ಶೌರ್ಯ ಘಟಕದ ಸ್ವಯಂಸೇವಕರು, ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು, CSC ಸೇವಾದಾರರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಜ್ಞಾನವಿಕಾಸ ಸಮನ್ವಯಾಧಿಕಾರಿ ಭಾರತಿ ಅವರು ನಿರೂಪಿಸಿ, ವಂದಿಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ