suddi-9 (1)

 

 

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳ ಅಂಕಗಳಿಕೆ ಕಡಿಮೆಯಾಗುವುದೆಂಬ ತಾತ್ಸಾರ ಭಾವನೆಯಿಂದ ಪಾಲಕರು ಹೊರಬಂದು ಗ್ರಾಮೀಣ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುವ ಮೂಲಕ ಶಾಲೆಗಳನ್ನು ಮುಚ್ಚುವುದರಿಂದ ಉಳಿಸಿ ನಮ್ಮ ಮಕ್ಕಳಿಗೂ ಉತ್ತಮ ವಿದ್ಯಾಭ್ಯಾಸ ನೀಡಬೇಕು ಎಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ತಿಳಿಸಿದರು.

ಬೆಟ್ಟಗೆರೆ ಗ್ರಾಮದ ನಿಂಗಮ್ಮ-ಬೊಮ್ಮಯ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ಎಸ್ಡಿಎಂಸಿ ಪದಾಧಿಕಾರಿಗಳ ಪದಗ್ರಹಣ, ಶಾಲಾ ಸಂಸತ್ತು ಉದ್ಘಾಟನೆ, ನೆಸ್ಲೆ ಗ್ರೂಪಿನಿಂದ ವಿದ್ಯಾರ್ಥಿಗಳಿಗೆ ಪ್ಲಾಸ್ಕ್, ಮತ್ತು ಶಾಲಾ ಆವರಣದಲ್ಲಿ ನೆಡಲು ಗಿಡ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, 6 ಎಕರೆ ಜಾಗದಲ್ಲಿರುವ ಬೆಟ್ಟಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಂದೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿತ್ತು. ಈಗ ಕಡಿಮೆಯಾದರೂ ಹಾಸ್ಟೆಲ್ ವ್ಯವಸ್ಥೆಯಾದ ಬಳಿಕ ದೂರದ ವಿದ್ಯಾರ್ಥಿಗಳು ಇಲ್ಲಿನ ಪ್ರೌಢಶಾಲೆಗೆ ಸೇರ್ಪಡೆಯಾಗುತ್ತಿದ್ದಾರೆ. ಬಾಲಕಿಯರ ಹಾಸ್ಟೆಲ್ ನಿರ್ಮಾಣವಾದರೆ ಇನ್ನಷ್ಟು ಹೆಚ್ಚು ವಿದ್ಯಾರ್ಥಿಗಳು ಸೇರ್ಪಡೆಯಾಗಲಿದ್ದಾರೆ. ಸ್ಮಾರ್ಟ್ ಕ್ಲಾಸ್, ದೊಡ್ಡದಾದ ಕ್ರೀಡಾಂಗಣ, ಸುಸಜ್ಜಿತವಾದ ಕಟ್ಟಡ ಸೇರಿದಂತೆ ಕೊರತೆಯಿಲ್ಲದಂತೆ ಶಿಕ್ಷಕರ ಸಂಖ್ಯೆಯಿದೆ. ಗ್ರಾಮೀಣ ಭಾಗದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಯಾವುದೆ ಅಡ್ಡಿ ಆತಂಕವಿಲ್ಲ. ಹಾಗಾಗಿ ಇನ್ನಷ್ಟು ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಗೆ ಸೇರ್ಪಡೆಯಾಗಬೇಕು ಎಂದು ತಿಳಿಸಿದರು.

ಶಾಲೆಗಳಿಗೆ ಸಕಲ ಸೌಲಭ್ಯವನ್ನು ಒದಗಿಸಲು ಸರ್ಕಾರವನ್ನು ಪದೇಪದೇ ಯಾಚಿಸುವುದರಲ್ಲಿ ಅರ್ಥವಿಲ್ಲ. ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವಿನ ಅಗತ್ಯವಿದೆ. ನೆಸ್ಲೆ ಗ್ರೂಪ್ ನಿಂದ ಶಾಲೆಗೆ ಶೌಚಗೃಹ ನಿರ್ಮಿಸಿ ಕೊಟ್ಟಿದ್ದಾರೆ. ಶಾಲೆ ಇನ್ನಷ್ಟು ಅಭಿವೃದ್ಧಿಯಾಗಬೇಕಾದರೆ ದಾನಿಗಳು ಮುಂದೆ ಬರಬೇಕು. ಪಠ್ಯೇತರ ಚಟುವಟಿಕೆಗಳಾದ ಕ್ರೀಡಾಕೂಟ, ಪ್ರತಿಭಾ ಕಾರಂಜಿ, ಶೈಕ್ಷಣಿಕ ಪ್ರವಾಸ ಸೇರಿದಂತೆ ಹಲವು ಕಾರ್ಯಕ್ರಮಗಳು ದಾನಿಗಳ ಸಹಕಾರದಿಂದ ನಡೆಯುತ್ತದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದರೆ ದಾನಿಗಳು ಕೂಡ ಶಾಲೆಯತ್ತ ಆಕರ್ಷಿತರಾಗುತ್ತಾರೆ. ಬೆಟ್ಟಗೆರೆ, ಪಲ್ಗುಣಿ, ತ್ರಿಪುರ ಈ 3 ಗ್ರಾಪಂ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕೆ ಬೆಟ್ಟಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಸರ್ಪಡೆಯಾಗಬೇಕು. ಈ ಪ್ರೌಢಶಾಲೆಯನ್ನು ಮೇಲ್ದರ್ಜೆಗೇರಿಸುವಂತೆ ಹಿಂದೆ ಶಿಕ್ಷಣ ಸಚಿವರಾಗಿದ್ದ ಮಧು ಬಂಗಾರಪ್ಪ ಅವರೊಂದಿಗೆ ತಾವು ಚರ್ಚಿಸಿರುವುದಾಗಿ ತಿಳಿಸಿದರು.

ನೆಸ್ಲೇ ಗ್ರೂಪ್ ಮುಖ್ಯಸ್ಥ ಶಿವಕುಮಾರ್ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ನೆರವಿನ ಅಗತ್ಯವಿದೆ ಎಂದು ಮನಗಂಡು ಗ್ರಾಮೀಣ ಪ್ರದೇಶದಲ್ಲಿರುವ ಬೆಟ್ಟಗೆರೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಶೌಚಗೃಹ ನಿರ್ಮಿಸಲಾಗಿದೆ. ಶಾಲಾ ಆರಣದಲ್ಲಿರುವ ಖಾಲಿ ಜಾಗದಲ್ಲಿ ನೆಟ್ಟು ಬೆಳೆಸಲು ವಿವಿಧ ಹಣ್ಣು ಹಂಪಲುಗಳ ಗಿಡಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬಾಟಲಿಯಲ್ಲಿ ಮನೆಯಿಂದ ನೀರು ತಂದು ಕುಡಿಯುವುದನ್ನು ನೋಡಿದ ಬಳಿಕ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಅವರಿಗೆ ಪ್ಲಾಸ್ಕ್ ನೀಡುವ ತೀರ್ಮಾನಕ್ಕೆ ಬರಲಾಯಿತು. ಸರ್ಕಾರಿ ಶಾಲೆಯ ವಿದ್ಯಾರ್ಥಿ ಪಾಲಕರು ಬಡವರ್ಗದವರಾಗಿರಬಹುದೆಂದು ಅರ್ಥ ಮಾಡಿಕೊಂಡು ಅಂತಹ ವಿದ್ಯಾರ್ಥಿಗಳಿಗೆ ಕೈಲಾದ ಸಹಾಯ ಮಾಡಿರುವುದಾಗಿ ತಿಳಿಸಿದರು.

ಎಸ್ ಡಿಎಂಸಿ ಅಧ್ಯಕ್ಷ ರುದ್ರೇಶ್, ಜಿಪಂ ಮಾಜಿ ಸದಸ್ಯರಾದ ಬಿ.ಆರ್.ಸುಬ್ಬಯ್ಯ, ನಿಖಿಲ್ ಚಕ್ರವರ್ತಿ, ಪತ್ರಕರ್ತ ಕಿರುಗುಂದ ಅಬ್ಬಾಸ್, ಮುಖ್ಯ ಶಿಕ್ಷಕಿ ಜ್ಯೋತಿ, ಶಿಕ್ಷಕರಾದ ಆಶಾ, ರವೀಂದ್ರ, ಪುಷ್ಪ, ಕಲ್ಲೇಶ್, ಮನೋಜ್, ಗ್ರಾಮಸ್ಥರಾದ ಬಿ.ಆರ್.ಯತೀಶ್, ಮನೋಜ್, ಸುಪ್ರೀತ್, ಯತೀಶ್, ರಮೇಶ್, ರಾಧಾ ಇತರರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ