suddi-12

 

 

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳಿಗೆ ಸೇರಿದ ಕುಟುಂಬಗಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ವ್ಯಾಜ್ಯಗಳನ್ನು ಶೀಘ್ರ ಇತ್ಯರ್ಥಪಡಿಸಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿನ್ನೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಕೂಡಲೇ ಪರಿಹಾರ ಕಲ್ಪಿಸಬೇಕು. ಜಾತಿ ನಿಂದನೆ ಪ್ರಕರಣಗಳನ್ನು ಹೂಡುವ ಸರ್ಕಾರದ ನಿಯಮಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಇದಕ್ಕೆ ಜಿಲ್ಲೆಯ ಎಲ್ಲ ಪೆÇಲೀಸ್ ಠಾಣೆಗಳಲ್ಲಿ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಪರಿಹಾರ ಮಂಜೂರು ಮಾಡಲು 50 ಪ್ರಕರಣಗಳು ಬಾಕಿ ಇದ್ದವು. 2026ರ ಕ್ಯಾಲೆಂಡರ್ ವರ್ಷದಲ್ಲಿ 59 ಪ್ರಕರಣಗಳು ದಾಖಲಾಗಿದ್ದು, ಒಟ್ಟು 109 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ. ಪ್ರಥಮ ವರ್ತಮಾನ ವರದಿ ಆಧಾರದ ಮೇಲೆ ಪರಿಹಾರ ಧನ ಮಂಜೂರು ಮಾಡಲು 49 ಪ್ರಕರಣಗಳು ಬಾಕಿ ಇವೆ. ದೋಷಾರೋಪ ಪಟ್ಟಿ ಆಧಾರದ ಮೇಲೆ 35 ಪ್ರಕರಣಗಳಿಗೆ ಪರಿಹಾರ ಧನ ನೀಡಲಾಗಿದೆ. ಒಟ್ಟು ರೂ.133.63 ಲಕ್ಷ ಪರಿಹಾರ ಧನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಮತ್ತೆ ಮಾತನಾಡಿದ ಜಿಲ್ಲಾಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಬೇಕು. ಕೆಲವು ಇಲಾಖೆಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಬಳಕೆಯಾಗದಿರುವುದು ಕಂಡು ಬಂದಿದೆ. ಈ ಯೋಜನೆಗಾಗಿ ಮೀಸಲಿಟ್ಟಿರುವ ಅನುದಾನವನ್ನು ಸಂಪೂರ್ಣವಾಗಿ ಖರ್ಚು ಮಾಡದಿದ್ದರೆ ಆಯಾ ಇಲಾಖೆಗಳ ಅಧಿಕಾರಿಗಳೇ ನೇರ ಹೊಣೆ ಎಂದರು.

ಎಸ್‍ಸಿಎಸ್‍ಪಿ, ಟಿಎಸ್‍ಪಿ ಅನುದಾನ ಬಳಕೆಯಲ್ಲಿ ಲೋಪ ಕಂಡು ಬಂದರೆ, ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಆಸ್ಪದ ಕೊಡದೆ ಅಧಿಕಾರಿಗಳು ಅರ್ಹ ಫಲಾನುಭವಿಗಳನ್ನು ಗುರುತಿಸಿ ಸವಲತ್ತು ನೀಡಲು ಕ್ರಮ ವಹಿಸಬೇಕು ಎಂದ ಅವರು, ಎಸ್‍ಸಿಎಸ್‍ಪಿ, ಟಿಎಸ್‍ಪಿ ಕಾಯ್ದೆ ಬಗ್ಗೆ ತರಬೇತಿ ಆಯೋಜಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರುಗಳಾದ ರಮೇಶ್, ಮಹೇಶ್, ನಾಗರಾಜು, ಅಂಜನಪ್ಪ, ತಿಮ್ಮಪ್ಪ, ಗಂಗಾಧರಪ್ಪ ಹಾಜರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ