ದಿನಾಂಕ 30/06/2026 ರಂದು ಬಿ.ಎಸ್ ಜಯರಾಮ್ ಅಧ್ಯಕ್ಷರು ಮೂಡಿಗೆರೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಇವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯ ನಡಾವಳಿ.
ಉಪಸ್ಥಿತಿ:
- ಶ್ರೀ ಬಿ.ಎಸ್. ಜಯರಾಮ್ ಮಾನ್ಯ ಅಧ್ಯಕ್ಷರು, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
- ಶ್ರೀಮತಿ ದಯಾವತಿ ಎಂ. ಸದಸ್ಯ ಕಾರ್ಯದರ್ಶಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
- ಶ್ರೀ ಅರುಣ್ ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
- ಶ್ರೀ ಗುರುವಪ್ಪ, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
- ಶ್ರೀ ಶ್ರೀನಿವಾಸ್, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
- ಶ್ರೀ ನವೀನ್, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
- ಶ್ರೀ ಭರತ್ ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
- ಶ್ರೀ ದೀಕ್ಷಿತ್, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
- ಶ್ರೀಮತಿ ಬಿ.ಕೆ. ಜಯಮ್ಮ, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
- ಶ್ರೀಮತಿ ಲೀಲಾವತಿ, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
- ಶ್ರೀಮತಿ ಜಯಶ್ರೀ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಚಿಕ್ಕಮಗಳೂರು
- ಶ್ರೀ ಸುದೀಪ್, ಐ.ಟಿ.ಐ. ಕಾಲೇಜು ಮೂಡಿಗೆರೆ
- ಶ್ರೀಮತಿ ಇಂಪನಾ ಶಿಶು ಅಭಿವೃದ್ದಿ ಯೋಜನಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ
- ಶ್ರೀ ಇಂದ್ರೇಶ್ ಶಿರಸ್ತೇದಾರ್ ಆಹಾರ ಇಲಾಖೆ
- ಶ್ರೀ ಜಾವಿದ್ ಮೆಸ್ಕಾಂ ಇಲಾಖೆ
- ಶ್ರೀ ನಿಂಗೇಗೌಡ, ಸಂಚಾರ ನಿಯಂತ್ರಕರು ಕೆ.ಎಸ್.ಆರ್.ಟಿ.ಸಿ. ಮೂಡಿಗೆರೆ
ಸ್ವಾಗತ: ಶ್ರೀಮತಿ ದಯಾವತಿ ಎಂ.ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ಪಂಚಾಯಿತಿ ಮೂಡಿಗೆರೆ ರವರು ಹಾಜರಿದ್ದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳಿಗೆ ಹಾಗೂ ಅನುಷ್ಠಾನ ಇಲಾಖೆಯ ಅಧಿಕಾರಿಗಳಿಗೆ ಸ್ವಾಗತ ಕೋರುತ್ತಾ, ಸಭೆಯನ್ನು ನಡೆಸಿಕೊಡುವಂತೆ ಮಾನ್ಯ ಅಧ್ಯಕ್ಷರನ್ನು ಕೋರಿದರು.
ಗೃಹಲಕ್ಷ್ಮಿ ಯೋಜನೆ:
ಇಲಾಖಾಧಿಕಾರಿಗಳು ಗೃಹಲಕ್ಷ್ಮಿ ಯೋಜನೆ ಬಗ್ಗೆ ಪ್ರಗತಿ ವರದಿ ಮಂಡಿಸಿದರು. ತಾಲ್ಲೂಕಿನಲ್ಲಿ ಒಟ್ಟು 29185 ಗೃಹಲಕ್ಷ್ಮಿ ಫಲಾನುಭವಿಗಳು ಇದ್ದು, ಇದರಲ್ಲಿ 28837 ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಬರುತ್ತಿರುತ್ತದೆ. ಹಾಗೂ ವಿವಿಧ ಕಾರಣಗಳಿಂದ ಗೃಹಲಕ್ಷ್ಮೀ ಯೋಜನೆಯಿಂದ ಹೊರಗೆ ಉಳಿದ NPCI-145, IT/GST-424, ತಿದ್ದುಪಡಿ/ಮರಣ-360 ಒಟ್ಟು 929 ಇರುತ್ತದೆ. ಇದುವರೆಗೆ 27908 ಫಲಾನುಭವಿಗಳ ಖಾತೆಗೆ ರೂ. 55816000/- ಹಣ ಜಮೆ ಆಗಿರುವುದಾಗಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಅನ್ನಭಾಗ್ಯ ಯೋಜನೆ:
ಆಹಾರ ಶಿರಸ್ತೇದಾರರು ಸಭೆಗೆ ಅನ್ನ ಭಾಗ್ಯ ಯೋಜನೆಯ ಪ್ರಗತಿ ವರದಿ ಮಂಡಿಸಿದರು. ಅನ್ನಭಾಗ್ಯ ಯೋಜನೆಯ ಪಡಿತರ ಬಂದಿದ್ದು, ಸಿಂಗಲ್ ಬಯೋಮೆಟ್ರಿಕ್ ಮಾಡಿರುತ್ತಾರೆ. ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕಲ್ಪಿಸಿದ್ದು, ಹೊಸ ಪಡಿತರ ಚೀಟಿಗೆ ಅವಕಾಶ ಕಲ್ಪಿಸಿರುವುದಿಲ್ಲ. ಪಡಿತರ ವಿತರಣೆ ಸಮರ್ಪಕವಾಗಿ ಆಗುತ್ತಿರುವುದಾಗಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಗೃಹಜ್ಯೋತಿ ಯೋಜನೆ:
ಇಲಾಖಾಧಿಕಾರಿಗಳು ಗೃಹಜ್ಯೋತಿ ಯೋಜನೆ ಬಗ್ಗೆ ಪ್ರಗತಿ ವರದಿ ಮಂಡಿಸಿದರು. ತಾಲ್ಲೂಕಿನಲ್ಲಿ ಒಟ್ಟು 25954 ಗೃಹಜ್ಯೋತಿ ಫಲಾನುಭವಿಗಳು ಇದ್ದು, 20811 ಫಲಾನುಭವಿಗಳಿಗೆ ಸರ್ಕಾರದಿಂದ ರೂ. 11049974/- ಅನುದಾನ ಬಿಡುಗಡೆಯಾಗಿರುತ್ತದೆ. ಹಾಗೂ ಸರ್ಕಾರದ ಆದೇಶದಂತೆ 127 ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ನೀಡಲಾದ ಮೊತ್ತ ರೂ.30760/- ಎಂದು ಸಭೆಗೆ ಮಾಹಿತಿ ನೀಡಿದರು. ಹಾಗೂ ಗೃಹಜ್ಯೋತಿ ಯೋಜನೆಯಲ್ಲಿ ಅಧಿಕ ವಿದ್ಯುತ್ ಬಳಸಿರುವ ಫಲಾನುಭವಿಗಳ ಸಂಖ್ಯೆ 5016 ಇದ್ದು, ರೂ.5185074/- ಬಿಲ್ ಪಾವತಿಸಿಕೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ರೈತರು ಬೋರ್ ವೆಲ್ ತೆಗೆಸಿದಾಗ ನೀರು ಬರದಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಮೆಸ್ಕಾಂ ಇಲಾಖೆಗೆ ಅರ್ಜಿ ನೀಡಿ ಸ್ವೀಕೃತಿ ಇಟ್ಟುಕೊಳ್ಳಬೇಕು. ಇಲ್ಲವಾದಲ್ಲಿ ಅನಗತ್ಯ ವಿದ್ಯುತ್ ಬಿಲ್ ಬರುವುದಾಗಿ ಮಾನ್ಯ ಅಧ್ಯಕ್ಷರು ಸಭೆಯಲ್ಲಿ ಮಾಹಿತಿ ನೀಡಿದರು.
ಯುವನಿಧಿ ಯೋಜನೆ:
ಯುವನಿಧಿ ಯೋಜನೆಯಡಿ 509 ವಿಧ್ಯಾರ್ಥಿಗಳು ನೊಂದಣಿಯಾಗಿದ್ದು, ಈವರೆಗೂ ಪದವಿ ವಿಭಾಗದಲ್ಲಿ 4552 ಹಾಗೂ ಡಿಪ್ಲೊಮೋ ವಿಭಾಗದಲ್ಲಿ 52 ವಿಧ್ಯಾರ್ಥಿಗಳು ನೊಂದಣಿಯಾಗಿರುತ್ತಾರೆ. ಮೇ-2026 ರ ಮಾಹೆಯವರೆಗೆ ಸರ್ಕಾರದಿಂದ ಒಟ್ಟು ರೂ.13734000/- ಅನುದಾನ ಬಿಡುಗಡೆಯಾಗಿರುತ್ತದೆ.
ಶಕ್ತಿ ಯೋಜನೆ:
ಇಲಾಖಾಧಿಕಾರಿಗಳು ಶಕ್ತಿ ಯೋಜನೆ ಬಗ್ಗೆ ಪ್ರಗತಿ ವರದಿ ಮಂಡಿಸಿದರು. ತಾಲ್ಲೂಕಿನಲ್ಲಿ ಮೇ-2026 ರ ಮಾಹೆಯಲ್ಲಿ ಪ್ರಸ್ತುತ 361540 ಫಲಾನುಭವಿಗಳು ಬಸ್‌ನಲ್ಲಿ ಪ್ರಯಾಣಿಸಿದ್ದು, ರೂ.20727375/- ಸರ್ಕಾರದಿಂದ ಅನುದಾನ ಬಿಡುಗಡೆಯಾಗಿರುತ್ತದೆ ಎಂದು ಸಭೆಯಲ್ಲಿ ತಿಳಿಸಿದರು. ಹಾಗೂ ಯೋಜನೆ ಪ್ರಾರಂಭದಿಂದ ಇಲ್ಲಿಯವರೆಗೆ ಶಕ್ತಿ ಯೋಜನೆಯಡಿ ಒಟ್ಟು 12122150 ಪ್ರಯಾಣಿಕರು ಪ್ರಯಾಣಿಸಿದ್ದು, ಪ್ರಯಾಣ ದರ ರೂ. 610630460/- ಆಗಿರುತ್ತದೆ.
ಇತರೆ ವಿಷಯಗಳು:
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ನಡೆಯುತ್ತಿದ್ದು, ಗಣತಿ ಮಾಡಲು ಬರುವ ಅಧಿಕಾರಿಗಳ ಜೊತೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳು ಮನೆಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಕುಟುಂಬದ ಮಾಹಿತಿ ನೀಡಿ ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಯಿಂದ ವಂಚಿತರಾಗದಂತೆ ಸಹಕರಿಸಲು ಸದಸ್ಯರುಗಳಿಗೆ ಶ್ರೀ ಬಿ.ಎಸ್. ಜಯರಾಮ್ ಮಾನ್ಯ ಅಧ್ಯಕ್ಷರು, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರವರು ಸೂಚನೆ ನೀಡಿದರು.
ಮೂಡಿಗೆರೆ ಕೆ.ಎಂ. ರಸ್ತೆಯ 2 ಬದಿ ಮಳೆಯಿಂದ ಮಣ್ಣು ಕೊಚ್ಚಿಹೋಗಿದ್ದು, ವಾಹನಗಳನ್ನು ರಸ್ತೆಯಿಂದ ಕೆಳಗಡೆ ಇಳಿಸಲು ಸಾದ್ಯವಾಗದೇ ರಸ್ತೆಯಲ್ಲಿಯೇ ನಿಲ್ಲಿಸಬೇಕಾದ ಪರಿಸ್ಥಿತಿ ಇದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.



