vmpm 1

 

 

ಮೂಡಿಗೆರೆ ವಿಎಂಪಿಎಂ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಗ್ ಹಾಗೂ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಮೂಡಿಗೆರೆ ತಾಲ್ಲೂಕು ಪಂಚಾಯಿತಿ ದೀನ್ ದಯಾಳ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ನೋಟ್ ಬುಕ್ ವಿತರಣೆ ಮಾಡಲಾಯಿತು.

ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷರಾದ ಎ.ಎನ್. ಮಹೇಶ್ ಕಾರ್ಯಕ್ರಮ ಉದ್ಘಾಟಿಸಿದರು. ವಿ.ಎಂ.ಪಿ.ಎಂ. ಟ್ರಸ್ಟ್ ಅಧ್ಯಕ್ಷ ವಿ.ಪಿ. ನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಯೋಜನೆ ಪ್ರಾಧಿಕಾರ ತಾಲ್ಲೂಕು ಅಧ್ಯಕ್ಷ ಬಿ.ಎಸ್. ಜಯರಾಂ, ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ, ಚಂದನ ಗ್ರೂಪ್ಸ್ ಮಾಲೀಕ ಕೆ. ಮಂಚೇಗೌಡ, ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಕೆ. ಲಕ್ಷ್ಮಣಗೌಡ, ಬಣಕಲ್ ಜೆಸಿಐ ಸ್ಥಾಪಕ ಅಧ್ಯಕ್ಷ ಸುರೇಶ್ ಶೆಟ್ಟಿ, ವಿಎಂಪಿಎಂ  ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಭಾಗ್ಯ ನಾರಾಯಣ, ವಕೀಲ ಬಿ.ಟಿ.ನಟರಾಜ್,  ಸವಿತಾ ಸಮಾಜ ತಾಲ್ಲೂಕು ಅಧ್ಯಕ್ಷ ಮಹೇಶ್ ಹೆಚ್.ವಿ, ಸವಿತಾ ಸಮಾಜ ಮಹಿಳಾ ಅಧ್ಯಕ್ಷೆ ಕವಿತಾ ಲೋಕೇಶ್, ಮಕ್ಕಳ ರಕ್ಷಣಾ ಸಮಿತಿ ಡಾ. ಲಕ್ಷ್ಮೀ ಮುಂತಾದವರು ಇದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ