August 29, 2026
;
IMG-20260710-WA0377

 

 

ಕೃಷಿ ಇಲಾಖೆಯ ವಿವಿಧ ಯೋಜನೆಗಳಡಿ ಮೂಡಿಗೆರೆ ತಾಲ್ಲೂಕು  ಬಣಕಲ್  ರೈತ ಸಂಪರ್ಕ ಕೇಂದ್ರ ಬಣಕಲ್ ವತಿಯಿಂದ ರೈತರಿಗೆ ಉಚಿತವಾಗಿ ಬತ್ತದ ಬೀಜ ಹಾಗೂ ಎರೆಹುಳು ಗೊಬ್ಬರ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕಿ ಸುಮ, ಕೃಷಿ ಇಲಾಖೆಯಿಂದ ನೀಡಲಾಗುತ್ತಿರುವ ಗುಣಮಟ್ಟದ ಬೀಜ, ಸಾವಯವ ಗೊಬ್ಬರ ಸೇರಿದಂತೆ ವಿವಿಧ ಸೌಲಭ್ಯಗಳನ್ನು ರೈತರು ಸದ್ಬಳಕೆ ಮಾಡಿಕೊಂಡು ಉತ್ಪಾದನೆ ಹೆಚ್ಚಿಸಿಕೊಳ್ಳಬೇಕು. ಎರೆಹುಳು ಗೊಬ್ಬರ ಬಳಕೆಯಿಂದ ಮಣ್ಣಿನ ಫಲವತ್ತತೆ ವೃದ್ಧಿಯಾಗಿ ಉತ್ತಮ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಬಳಿಕ ರೈತರಿಗೆ ಬತ್ತದ ಬೀಜ ಹಾಗೂ ಎರೆಹುಳು ಗೊಬ್ಬರ ವಿತರಿಸಲಾಯಿತು. ಈ ಸಂದರ್ಭದಲ್ಲಿ ದಾಸ್ತಾನು ನಿರ್ವಾಹಕ ಪ್ರದೀಪ್, ತಾಂತ್ರಿಕ ಸಹಾಯಕಿ ಶ್ವೇತಾ ಹಾಗೂ ರೈತರು ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;