kannadaprabha_2026-07-11_uonullcm_74142749614901277864638876489387934221656565n

 

 

ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾಗಿದ್ದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದಲ್ಲಿ ಜನಿಸಿದ ಎಸ್. ಜಾನಕಿ ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.

1957ರಲ್ಲಿ ಪ್ರಸಿದ್ಧ ಸಂಗೀತ ನಿರ್ದೇಶಕ ಟಿ. ಚಲಪತಿ ರಾವ್ ಅವರ ತಮಿಳು ಚಿತ್ರ ‘ವಿಧಿಯಿನ್ ವಿಳಯಾಟ್ಟು’ ಜಾನಕಿ ಅವರು ಹಾಡಿದ ಪ್ರಥಮ ಚಿತ್ರ. ಅವರು ದಕ್ಷಿಣ ಭಾರತದ ಎಲ್ಲಾ ಪ್ರಧಾನ ಭಾಷೆಗಳ ಗಾಯಕಿಯಾದರು. ಜೊತೆಗೆ ಹಿಂದಿಯನ್ನೊಳಗೊಂಡಂತೆ ಭಾರತದ ಬಹಳಷ್ಟು ಭಾಷೆಗಳಲ್ಲಿ ತಮ್ಮ ಗಾನಮಾಧುರ್ಯವನ್ನು ಹರಿಸಿದರು.

ಅಸಂಖ್ಯಾತ ಸುಮಧುರ ಕನ್ನಡ ಗೀತೆಗಳಿಗೆ ಅವರು ದನಿಯಾಗಿದ್ದಾರೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ