ಮೂಡಿಗೆರೆ ತಾಲ್ಲೂಕು ಬಣಕಲ್ ನಲ್ಲಿ ನಡೆದ 7 ಜಿಲ್ಲೆಗಳ ಐಸಿಎಸ್‍ಇ ಶಾಲೆಗಳ ವಲಯ ಮಟ್ಟದ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿಯಲ್ಲಿ ಬಣಕಲ್ ನಜರೆತ್ ಶಾಲೆಯ ವಿದ್ಯಾರ್ಥಿಗಳು ಪ್ರಶಸ್ತಿ ಪಡೆದುಕೊಂಡಿದ್ದಾರೆ.
ನಜರೆತ್ ಶಾಲೆಯ ವಿದ್ಯಾರ್ಥಿಗಳು 19ರ ವಯೋಮಾನದ ಬಾಲಕಿಯರ ತಂಡ ವಾಲಿಬಾಲ್ ಮತ್ತು ಥ್ರೋಬಾಲ್ ನಲ್ಲಿ ದ್ವಿತೀಯ ಸ್ಥಾನ ಮತ್ತು 19 ರ ವಯೋಮಾನದ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.


