ಚಿಕ್ಕಮಗಳೂರು ಜಿಲ್ಲೆಯ ಖಾಸಗಿ ಕಾಫಿ ತೋಟ ಒಂದರಲ್ಲಿ ಗಂಡು ಹುಲಿಯ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿದೆ.
ತಾಲ್ಲೂಕಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ, ಮುತ್ತೋಡಿ ಪ್ರಾದೇಶಿಕ ವಲಯದ ವ್ಯಾಪ್ತಿಯ ಖಾಸಗಿ ಕಾಫಿ ತೋಟದಲ್ಲಿ ಗಂಡು ಹುಲಿಯ ಮೃತದೇಹ ಇರುವುದು ಬೆಳಕಿಗೆ ಬಂದಿದೆ.
ಹುಲಿ ಮೃತಪಟ್ಟು ಒಂದು ದಿನ ಆಗಿದೆ ಎನ್ನಲಾಗಿದೆ. ಇಂದು ಕೇಂದ್ರ ಸರ್ಕಾರದ ಹುಲಿ ಸಂರಕ್ಷಣಾ ಪ್ರಾಧಿಕಾರದ ನಿಯಮದ ಪ್ರಕಾರ ಹುಲಿಯ ಮರಣೋತ್ತರ ಪರೀಕ್ಷೆ ನಡೆಯಲಿದೆ.
ಹುಲಿಯ ಸಾವಿಗೆ ಇನ್ನಷ್ಟೇ ನಿಖರ ಕಾರಣ ಗೊತ್ತಾಗ ಬೇಕಾಗಿದೆ.ಸ್ಥಳಕ್ಕೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.


