ksrp 2

 

 

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಒಟ್ಟು 2,314 ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ  ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.

ಹುದ್ದೆಗಳ ವಿವರ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪೊಲೀಸ್ ಇಲಾಖೆಯೊಂದಿಗೆ ಜಂಟಿಯಾಗಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP), ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF), ಮತ್ತು ಇನ್ಫಾಂಟ್ರಿ ಬೆಟಾಲಿಯನ್ (IRB) ವಿಭಾಗಗಲ್ಲಿ ಒಟ್ಟು 2,314  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅದರಲ್ಲಿ,

  • ಉಳಿಕೆ ಮೂಲ ವೃಂದ: 1,455 ಹುದ್ದೆಗಳು
  • ಕಲ್ಯಾಣ ಕರ್ನಾಟಕ ವೃಂದ: 859 ಹುದ್ದೆಗಳು

ಅರ್ಹತೆ ಮತ್ತು ವಯೋಮಿತಿ:

  • ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
  • ವಯೋಮಿತಿ: 18 ರಿಂದ 33 ವರ್ಷಗಳು (SC/ST/OBC ಅಭ್ಯರ್ಥಿಗಳಿಗೆ 35 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇರುತ್ತದೆ).

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಒಟ್ಟು ನಾಲ್ಕು ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತದೆ:

  • ಲಿಖಿತ ಪರೀಕ್ಷೆ: 100 ಅಂಕಗಳ OMR ಆಧಾರಿತ ವಸ್ತುನಿಷ್ಠ ಪರೀಕ್ಷೆ (0.25 ನೆಗೆಟಿವ್ ಮಾರ್ಕ್ಸ್ ಇರುತ್ತದೆ).
  • ದೈಹಿಕ ಗುಣಮಟ್ಟದ ಪರೀಕ್ಷೆ
  • ದೈಹಿಕ ಸಹಿಷ್ಣುತೆ ಪರೀಕ್ಷೆ
  • ವೈದ್ಯಕೀಯ ತಪಾಸಣೆ

ವೇತನ ಶ್ರೇಣಿ: ₹37,500 ರಿಂದ ₹76,100/-

ಪ್ರಮುಖ ದಿನಾಂಕ:

  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 13 ಜುಲೈ 2026 (ಈಗಾಗಲೇ ಪ್ರಾರಂಭವಾಗಿದೆ)
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಆಗಸ್ಟ್ 2026 (ಕೊನೆಯ ದಿನದ ತನಕ ಕಾಯಬೇಡಿ)
  • ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 11 ಆಗಸ್ಟ್ 2026

ಲಿಖಿತ ಪರೀಕ್ಷೆ ನಡೆಯುವ ದಿನಾಂಕ: 20 ಸೆಪ್ಟೆಂಬರ್ 2026

ಅರ್ಜಿ ಶುಲ್ಕ:

  • ಸಾಮಾನ್ಯ ಮತ್ತು ಒಬಿಸಿ ವರ್ಗದ (ಪ್ರವರ್ಗ – 2ಎ 2ಬಿ 3ಎ 3ಬಿ) ಅಭ್ಯರ್ಥಿಗಳಿಗೆ 750 ರೂಪಾಯಿ ಶುಲ್ಕ
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಒಬಿಸಿ ವರ್ಗದ (ಪ್ರವರ್ಗ 1) ಅಭ್ಯರ್ಥಿಗಳಿಗೆ 500 ರೂಪಾಯಿ ಶುಲ್ಕ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್ ಆದ https://cetonline.karnataka.gov.in/KSRP_2026/Account/Login ಗೆ ಭೇಟಿ ನೀಡಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ.

ನೇಮಕಾತಿ ಅಧಿಸೂಚನೆ:

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ