15Mudigere1A

 

 

ಮೂಡಿಗೆರೆ ತಾಲೂಕಿನ ಕಸಬಾ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಸಿ.ಬಿ.ಶಂಕರ್ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ.ಸುರೇಂದ್ರ ಅವರು ಏಕಪಕ್ಷೀಯವಾಗಿ ವಜಾಗೊಳಿಸಿದ್ದ ಹಿನ್ನಲೆಯಲ್ಲಿ ನೂರಾರು ಮಂದಿ ಕಾಂಗ್ರೇಸ್ ಕಾರ್ಯಕರ್ತರು ಬುಧವಾರ ಪಟ್ಟಣದ ಕಾಂಗ್ರೆಸ್ ಕಚೇರಿ ಎದುರು ಮೌನ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಪ್ರತಿಕ್ರಿಯಿಸಿದ ಧರಣಿ ನಿರತರು, ಪಕ್ಷ ಕೊಟ್ಟಿರುವ ಜವಾಬ್ದಾರಿ ಸ್ಥಾನವನ್ನು ಸರಿಯಾಗಿ ನಿಭಾಯಿಸದಿದ್ದರೆ ಅವರಿಗೆ ನೋಟೀಸು ನೀಡಬೇಕು. ಜತೆಗೆ ಜಿಲ್ಲಾಧ್ಯಕ್ಷರ ಗಮನಕ್ಕೆ ತಂದು ನಂತರ ವಜಾಗೊಳಿಸುವ ಕ್ರಮ ಕೈಗೊಳ್ಳಬೇಕು. ಆದರೆ ಅನೇಕ ವರ್ಷದಿಂದ ಪಕ್ಷಕ್ಕಾಗಿ ಶ್ರಮಿಸುತ್ತಿರುವ ಕಸಬಾ ಹೋಬಳಿ ಅಧ್ಯಕ್ಷ ಸಿ.ಬಿ.ಶಂಕರ್ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನಯಮ ಬಾಹೀರವಾಗಿ ಏಕಾಏಕಿ ವಜಾಗೊಳಿಸಿರುವ ಕ್ರಮ ಸರಿಯಲ್ಲವೆಂದು ಹೇಳಿದರು.
ಈ ಹಿನ್ನಲೆಯಲ್ಲಿ ಧರಣಿ ನಿರತರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪ್ರಾಮಾಣಿಕ ಕಾರ್ಯಕರ್ತರಿಗೆ ಗೌರವಿಸದೇ, ಸರ್ವಾಧಿಕಾರಿ ಧೋರಣೆ, ಪಕ್ಷದ ಸಿದ್ಧಾಂತ ವಿರೋಧಿಯಾಗಿ, ಏಕಪಕ್ಷೀಯ ನಿರ್ಧಾರ ಕೈಗೊಳ್ಳುವ ಕಾರ್ಯ ಮಾಡಿದ್ದಾರೆ. ಅವರನ್ನು ಪಕ್ಷದ ಜವಾಬ್ದಾರಿಯಿಂದ ವಜಾಗೊಳಿಸಿ ಕಿಕ್‍ಔಟ್ ಮಾಡಬೇಕೆಂದು ನಾಮಫಲಕ ಹಿಡಿದು ಧರಣಿ ನಡೆಸಿದರು.

ಧರಣಿ ಸ್ಥಳಕ್ಕೆ ಜಿಲ್ಲಾಧ್ಯಕ್ಷರು ಆಗಮಿಸಿ ತಮ್ಮ ಮನವಿ ಸ್ವೀಕರಿಸಬೇಕೆಂದು ಅವರಿಗೆ ಪತ್ರ ಬರೆಯಲಾಗಿದೆ. ಒಂದು ವೇಳೆ ಜಿಲ್ಲಾಧ್ಯಕ್ಷರು ಇಲ್ಲಿಗೆ ಆಗಮಿಸದೇ, ಮೌನ ಧರಣಿ ನಿರತರು ಹಾಗೂ ಪದಾಧಿಕಾರಿಗಳ ಮೇಲೆ ಯಾವುದೇ ಶಿಸ್ತು ಕ್ರಮ ಕೈಗೊಂಡರೆ ಬ್ಲಾಕ್ ಕಾಂಗ್ರೆಸ್‍ನ ಎಲ್ಲಾ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಕೆಡಿಪಿ ಸದಸ್ಯ ಎಂ.ಎನ್.ಅಶ್ವತ್, ಬಣಕಲ್ ಹೋಬಳಿ ಅಧ್ಯಕ್ಷ ಸುಬ್ರಹ್ಮಣ್ಯ, ಕಸಬಾ ಹೋಬಳಿ ಅಧ್ಯಕ್ಷ ಸಿ.ಬಿ.ಶಂಕರ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಆರ್ಯ ಪಟೇಲ್, ಎಸ್ಸೀ ಘಟಕದ ಅಧ್ಯಕ್ಷ ಸುಧೀರ್ ಚಕ್ರಮಣಿ, ನಗರಾಧ್ಯಕ್ಷ ಸುರೇಶ್‍ಜೈನ್, ಮುಖಂಡರಾದ ನಿಶಾಂತ್ ಪಟೀಲ್, ದೀಕ್ಷಿತ್ ಕಣಚೂರು, ರವಿ ಕುನ್ನಳ್ಳಿ, ರಮೇಶ್ ಹೊಸ್ಕೆರೆ, ಸುರೇಂದ್ರ ಉಗ್ಗೇಹಳ್ಳಿ, ತಿಲಕ್, ಸುಂದರ್ ಪೂಜಾರಿ, ಜಯಮ್ಮ, ಸುಧಾ, ಮನೋಜ್ ದಾರದಹಳ್ಳಿ, ದೀಪು ಕಡಿದಾಳ್ ಮತ್ತಿತರರಿದ್ದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ