rotary1

 

 

ಮೂಡಿಗೆರೆ ರೋಟರಿ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬುಧವಾರ ಸಂಜೆ ಪಟ್ಟಣದ ಜೇಸಿ ಭವನದಲ್ಲಿ ವಿಜೃಂಭಣೆಯಿಂದ ನೆರವೇರಿತು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರೋಟರಿ ಮಾಜಿ ಜಿಲ್ಲಾ ರಾಜ್ಯಪಾಲ ಹೆಚ್.ಆರ್. ಕೇಶವ್ ಅವರು ರೋಟರಿಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಮಾಜಮುಖಿ ಚಟುವಟಿಕೆಗಳಲ್ಲಿ ಸದಸ್ಯರು ಹೆಚ್ಚಿನ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ನೂತನ ಅಧ್ಯಕ್ಷರಾಗಿ ಬಿ.ಕೆ. ದಿನೇಶ್ ಬೆಟ್ಟಗೆರೆ ಹಾಗೂ ಕಾರ್ಯದರ್ಶಿಯಾಗಿ ಹೆಚ್.ಬಿ. ಸಂತೋಷ್ ಕುಮಾರ್ ಹಂಡುಗುಳಿ ಅಧಿಕಾರ ಸ್ವೀಕರಿಸಿದರು.

 

ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಪ್ರಮಾಣ ವಚನ ಬೋಧಿಸಿ ಅಧಿಕಾರ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಕಳೆದ ಸಾಲಿನ ಅಧ್ಯಕ್ಷ ಹೆಚ್.ಎನ್. ಪ್ರಸಾದ್ ಅವರು ಕಳೆದ ಸಾಲಿನ ಸೇವಾ ಕಾರ್ಯಗಳ ಬಗ್ಗೆ ವಿವರ ನೀಡಿ. ಕಳೆದ ಸಾಲಿನಲ್ಲಿ ಸುಮಾರು 100ಕ್ಕೂ ಅಧಿಕ ಸೇವಾ ಕಾರ್ಯಗಳನ್ನು ನಡೆಸಲಾಗಿದೆ. ಇದಕ್ಕೆಲ್ಲಾ ಬೆಂಬಲವಾಗಿ ನಿಂತ ಸದಸ್ಯರು ಮತ್ತು ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಕಾರ್ಯದರ್ಶಿ ಕೆ.ವಿ. ವಿಕಾಶ್ ವರದಿ ಮಂಡಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಡಾ. ಗಣೇಶ್, ಜೋನಲ್ ಲೆಪ್ಟಿನೆಂಟ್ ಪ್ರಕಾಶ್ ಯು.ವಿ. ಉಪಸ್ಥಿರಿದ್ದು, ಶುಭ ಹಾರೈಸಿದರು. ಕಾರ್ಯದರ್ಶಿ ಹೆಚ್.ಬಿ. ಸಂತೋಷ್ ಕುಮಾರ್ ವಂದನಾರ್ಪಣೆ ಸಲ್ಲಿಸಿದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ