pranesh m k_page-0001

 

 

ದಿನಾಂಕ 16 ಜುಲೈ ಗುರುವಾರ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಅದ ನನ್ನ ವಿಧಾನ ಪರಿಷತ್ ಸದಸ್ಯತ್ವ ಸುಪ್ರೀಂ ಕೋರ್ಟ್ ಆದೇಶದಂತೆ ರದ್ದಾಗಿದೆ ಎಂದು ಈಗಾಗಲೇ ಎಲ್ಲಾ ಪತ್ರಿಕೆ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷ ವಿಜಯೋತ್ಸವ ಕೂಡ ಆಚರಿಸಿದೆ. ಆದರೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ನಾಮಿನಿ ಸದಸ್ಯರಿಗೆ ಮತದಾನದ ಹಕ್ಕು ಇರುವುದಿಲ್ಲ ಎಂಬ ಈ ಹಿಂದಿನ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ ಹೊರತು. ನನ್ನ ಸದಸ್ಯತ್ವವನ್ನು ರದ್ದುಗೊಳಿಸಿರುವುದಿಲ್ಲ ಎಂದು ವಿಧಾನಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು ತಿಳಿಸಿದ್ದಾರೆ.

ಈಗಾಗಲೇ ಚುನಾವಣಾ ಆಯೋಗ ತನ್ನ ಪ್ರಕ್ರಿಯೆಯನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟಿ ಗೆ ಕಳುಹಿಸಿಕೊಟ್ಟಿದ್ದು. ಇದೇ ಲಕೋಟೆಯನ್ನು ಮುಚ್ಚಿದ ರೀತಿಯಲ್ಲಿ ಹೈಕೋರ್ಟಿಗೆ ಸುಪ್ರೀಂ ಕೋರ್ಟ್ ವಾಪಸ್ ಕಳುಹಿಸಿದ್ದು. ಹೈಕೋರ್ಟಿನಲ್ಲಿ ಚುನಾವಣೆ ತಕರಾರಿನ ಬಗ್ಗೆ ತೀರ್ಮಾನಿಸಬೇಕು ಎಂದು ಸೂಚಿಸಿದೆ.

ಅದರೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ಎಲ್ಲಿಯೂ ಕೂಡ ನನ್ನ ಸದಸ್ಯತ್ವ (MLC)ರದ್ದತಿಯ ಬಗ್ಗೆ ಹೇಳಿಲ್ಲ. ನ್ಯಾಯಾಲಯಗಳೂ ಕೊಡುವ ತೀರ್ಪಿಗೆ ನಾನು ಬದ್ಧನಾಗಿದ್ದು, ಮುಂದಿನ ಬೆಳವಣಿಗೆಯನ್ನು ಕಾದು ನೋಡಬೇಕು ಎಂದು ಅವರು ಹೇಳಿದ್ದಾರೆ.

 

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ