IMG-20260713-WA0162

 

 

ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಅಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್ ಅವರ ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವೆಗಳನ್ನು ಪರಿಗಣಿಸಿ, ಅವರಿಗೆ ನಾಳೆ (ಜುಲೈ 19) ಮೈಸೂರು ನಗರದ ಕಲಾಭವನದಲ್ಲಿ ಭವ್ಯ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಕನ್ನಡ ನಾಡು, ನುಡಿ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಮಡ್ಡೀಕೆರೆ ಗೋಪಾಲ್ ಅವರು ಸಲ್ಲಿಸಿರುವ ಅಪಾರ ಸೇವೆಯನ್ನು ಗೌರವಿಸುವ ಸಲುವಾಗಿ ವಿವಿಧ ಸಂಘಟನೆಗಳು, ಸಾಹಿತಿಗಳು ಹಾಗೂ ಅವರ ಅಭಿಮಾನಿ ಬಳಗದ ವತಿಯಿಂದ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜುಲೈ 19 ಭಾನುವಾರದಂದು ಬೆಳಿಗ್ಗೆ 10-30ರಿಂದ  ಮೈಸೂರಿನ ಕಲಾಭವನದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಲಿದ್ದಾರೆ.

ವಿವಿಧ ಮಠಗಳ ಹಿರಿಯ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ “ಮಡ್ಡೀಕೆರೆ ಮಾಣಿಕ್ಯ ನಮ್ಮ ಗೋಪಾಲ್” ಅಭಿನಂದನಾ ಗ್ರಂಥ, “ಹೃದಯವಂತ” ಕೃತಿ, “ಕಥಾಗುಚ್ಚ” ಕಥಾ ಸಂಕಲನ, “ಸ್ನೇಹಶೀಲ” ಕಾವ್ಯಾಭಿನಂದನಾ ಗ್ರಂಥ ಬಿಡುಗಡೆಯಾಗಲಿವೆ.

ನಾಳೆ ನಡೆಯಲಿರುವ ಈ ಸಮಾರಂಭದಲ್ಲಿ ರಾಜ್ಯದ ಪ್ರಮುಖ ಸಾಹಿತಿಗಳು, ಜನಪ್ರತಿನಿಧಿಗಳು, ಕನ್ನಡಪರ ಹೋರಾಟಗಾರರು ಹಾಗೂ ಸಾಂಸ್ಕೃತಿಕ ವಲಯದ ಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಡ್ಡೀಕೆರೆ ಗೋಪಾಲ್ ಅವರ ಸಾಧನೆ ಮತ್ತು ಸಾರಸ್ವತ ಲೋಕಕ್ಕೆ ಅವರು ನೀಡಿದ ಕೊಡುಗೆಗಳ ಕುರಿತು ಗಣ್ಯರು ಮಾತನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಅವರನ್ನು ಸಾರ್ವಜನಿಕವಾಗಿ ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಲಾಗುವುದು.

ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಮಡ್ಡೀಕೆರೆ ಗೋಪಾಲ್ ಅವರು ಮೂಲತಃ ಮೂಡಿಗೆರೆ ತಾಲ್ಲೂಕಿನ ಮಡ್ಡೀಕೆರೆ ಗ್ರಾಮದವರಾಗಿದ್ದು, ಮಡ್ಡೀಕೆರೆ ದಿವಂಗತ ಸೋಮೇಗೌಡ ಮತ್ತು ಶ್ರೀಮತಿ ಹಾಲಮ್ಮ ದಂಪತಿಗಳು ಪುತ್ರರು. ಅವರು  ಕಳೆದ ಹಲವು ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದಾರೆ. ಮೈಸೂರು ಸಾಂಸ್ಕೃತಿಕ ವಲಯದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು, ಎರಡನೇ ಅವಧಿಗೆ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ