suddi-4(A)

 

 

ಮೂಡಿಗೆರೆ ತಾಲ್ಲೂಕಿನ ಬೆಟ್ಟಿಗೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಳೂರು ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಕೆಸರುಗದ್ದೆಯಂತಾಗಿದೆ.  ಕೆಸರು ಹಳ್ಳ ದಾಟಿಯೇ ಮಕ್ಕಳು, ಸಾರ್ವಜನಿಕರು ತಿರುಗಾಡಬೇಕು ಜನಪ್ರತಿನಿದಿಗಳ ಮತ್ತು ಅಧಿಖಾರಿಗಳ ನಿರ್ಲಕ್ಷಕ್ಕೆ ಹಿಡಿದ ಕನ್ನಡಿಯಾಗಿದೆ.

ಕೋಳೂರು ಗ್ರಾಮದ ಈ ರಸ್ತೆಯಲ್ಲಿ ನಿಂತಿರುವ ವಿದ್ಯಾರ್ಥಿಗಳು ಪಕ್ಕದ ಹಳಿಕೆ ಗ್ರಾಮದವರಾಗಿದ್ದು, ಅವರು ಪ್ರತಿನಿತ್ಯ ಇದೇ ಕೆಸರು ಹಳ್ಳವನ್ನು ದಾಟಿಕೊಂಡೇ ಕೋಳೂರಿನ ಶಾಲೆಗೆ ಬರಬೇಕಾದ ಅನಿವಾರ್ಯತೆ ಎದುರಾಗಿದೆ. ಅಲ್ಲಿನ ಚಿತ್ರಣವನ್ನು ನೋಡಿದರೆ ಪುಟ್ಟ ಕಣ್ಮಣಿಗಳ ಕಷ್ಟ ಯಾರಿಗಾದರೂ ಅರ್ಥವಾಗುತ್ತದೆ. ಕೇವಲ ವಿದ್ಯಾರ್ಥಿಗಳಷ್ಟೇ ಅಲ್ಲದೆ, ಕೋಳೂರು ಗ್ರಾಮದ ಪ್ರತಿಯೊಬ್ಬ ನಾಗರಿಕರೂ ಪ್ರತಿನಿತ್ಯ ಇದೇ ಕೆಸರು ರಸ್ತೆಯಲ್ಲೇ ಓಡಾಡಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ತೋಟದ ಮಾಲೀಕರ ತಕರಾರು ಪಂಚಾಯತ್ ಮೌನ ! : ರಸ್ತೆಯಲ್ಲಿ ನಿಂತಿರುವ ನೀರನ್ನು ಪಕ್ಕದ ತೋಟಕ್ಕೆ ಹರಿಸೋಣವೆಂದರೆ ಅಲ್ಲಿನ ತೋಟದ ಮಾಲೀಕರು ತಕರಾರು ತೆಗೆಯುತ್ತಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಬೆಟ್ಟಿಗೆರೆ ಗ್ರಾಮ ಪಂಚಾಯತಿಯವರಂತೂ ತಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲದಂತೆ ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿದ್ರಿಸುತ್ತಿರುವ ಗ್ರಾಮ ಪಂಚಾಯತ್ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರ ಮನವಿಗೊಂಡಿದ್ದಾರೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ