leed suddi (1)

 

 

ಚಿಕ್ಕಮಗಳೂರು ನಗರದ ಬೈಪಾಸ್ ಸಮೀಪದ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಸದ ಸ್ಯರುಗಳು, ಬಿಜೆಪಿ ಕಾರ್ಯಕರ್ತರು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡು ಪರಿಶೀಲನೆ ನಡೆಸಿದರು.

ಈ ವೇಳೆ ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್ ಮಾತನಾಡಿ ಬಡವ ಹಾಗೂ ಮಧ್ಯಮ ವರ್ಗದವ ರೇ ಹೆಚ್ಚು ಆಗಮಿಸುವ ವಸತಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಿಕೊಡಬೇಕು. ವಿಶೇಷವಾಗಿ ವಿದ್ಯಾರ್ಥಿ ನಿಯರಿಗೆ ಹೆಚ್ಚಿನ ಕಾಳಜಿ ವಹಿಸಿ, ಆರೋಗ್ಯಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂ ದು ಸೂಚಿಸಿದರು.

ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಮಾತನಾಡಿ ಕಳಪೆ ಗುಣಮಟ್ಟದ ಆ ಹಾರ ಸರಬರಾಜು ಮಾಡಿರುವ ಟೆಂಡರ್‍ದಾರರ ವಿರುದ್ಧ ಹಾಗೂ ಕಳಪೆ ಆಹಾರವನ್ನೇ ಮಕ್ಕಳಿಗೆ ನೀಡಿ ರುವ ವಾರ್ಡನ್‍ನ ವಿರುದ್ಧವು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಹಲವು ದಿನಗಳಿಂದ ವಿದ್ಯಾರ್ಥಿಗಳು ಕಳಪೆ ಆಹಾರ ಸೇವನೆಯಿಂದ ಚರ್ಮಕಾಯಿಲೆ ಸೇ ರಿದಂತೆ ರೋಗರುಜಿನಿಗೆ ತುತ್ತಾಗುವ ಸಂಭವವಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮಧ್ಯಸ್ಥಿಕೆ ವಹಿಸಿ, ಅನಾ ರೋಗ್ಯಕ್ಕೆ ತುತ್ತಾಗಿರುವ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆ ಒದಗಿಸಿಕೊಡಬೇಕು ಎಂದು ತಿಳಿಸಿದರು.

ನಗರಸಭೆ ಸದಸ್ಯೆ ಕವಿತಾ ಶೇಖರ್ ಮಾತನಾಡಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸಿದ ಬೆನ್ನ ಲ್ಲೇ ಶೌಚಾಲಯ, ಅಡುಗೆ ಕೋಣೆ ತಕ್ಕಮಟ್ಟಿಗೆ ಸ್ವಚ್ಚತೆ ಮಾಡಲಾಗಿದೆ. ಆದರೆ ಹೆಣ್ಣುಮಕ್ಕಳಿಗೆ ಸ್ಯಾನಿಟೆರಿ ಪ್ಯಾಡ್ ಸರಿಯಾಗಿ ವಿತರಿಸುತ್ತಿಲ್ಲ. ಈ ಬಗ್ಗೆ ಶಾಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆ ನಿಗಾವಹಿಸಬೇ ಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ ವಸತಿ ಶಾಲೆಯ ಅವ್ಯವಸ್ಥೆಯ ಬಗ್ಗೆ ವಿದ್ಯಾರ್ಥಿಗಳು ಮುಕ್ತವಾಗಿ ಸಮಸ್ಯೆ ಹೇಳಿಕೊಂಡಿದ್ದಾರೆ. ಈ ಬಗ್ಗೆ ಜನಪ್ರತಿನಿಧಿಗಳು ಗಮನಹರಿಸಬೇ ಕು. ಬಡವರೇ ಹೆಚ್ಚು ದಾಖಲಾಗುವ ಶಾಲೆಗೆ ಕನಿಷ್ಟಮಟ್ಟದ ಸೌಲಭ್ಯ ಒದಗಿಸದಿರುವುದು ಸರ್ಕಾರದ ಹೀ ನಾಯ ಸ್ಥಿತಿ ತೋರಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಲಲಿತಾ ರವಿನಾಯ್ಕ್, ಇಂದಿರಾ, ಬಿಜೆಪಿ ಮುಖಂಡರುಗ ಳಾದ ವೀಣಾಶೆಟ್ಟಿ, ಸಚ್ಚಿನ್ ಮತ್ತಾವರ, ತಿಲಕ್‍ರಾಜ್, ಪುನೀತ್, ಗೌತಮ್, ಭಾರತಿ ಉಮೇಶ್ ಮುಂತಾ ದವರು ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ