ಜನಪದ ಕಲೆ, ಸಾಹಿತ್ಯ, ಸಂಗೀತ ಸಮಾಜಕ್ಕೆ ಉತ್ತಮ ನಾಗರಿಕತೆಯನ್ನು ಕಲಿಸುವುದರಿಂದಲೇ ಭಾರತೀಯ ಸಂಸ್ಕøತಿ ಜೀವಂತವಾಗಿದೆ ಎಂದು ಸಾಹಿತಿ ಹಳೆಕೋಟೆ ರಮೇಶ್ ಹೇಳಿದರು.
ಅವರು ಮಂಗಳವಾರ ಸಂಜೆ ಕನ್ನಡಪರ ಹೋರಾಟಗಾರ ಹೊರಟ್ಟಿ ರಘು ಅವರ ಮನೆ ಆವರಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಏರ್ಪಡಿಸಿದ್ದ ಜಾನಪದ ಜಗುಲಿ ಮನೆಯಂಗಳದಿ ಜಾನಪದರ ಸಾಹಿತ್ಯ ಹಾಗೂ ಸಾಂಸ್ಕøತಿಕ ಸಂಭ್ರಮಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದೆ ಕೃಷಿಕರು ಹಾಗೂ ಮಹಿಳೆಯರಿಂದ ಜಾನಪದ ಕಲೆ ಸಾಹಿತ್ಯ ಸಂಗೀತ ಸದೃಢವಾಗಿ ಬೆಳೆದು ಬಂದಿವೆ. ಇದನ್ನು ಯುವ ಜನತೆ ಪೆÇೀಷಿಸಿ ಮುಂದಿನ ತಲೆಮಾರಿಗೆ ಕೊಂಡಯ್ಯಬೇಕಾಗಿದೆ ಎಂದು ಹೇಳಿದರು.
ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಮಾತನಾಡಿ, ಭಾರತೀಯ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿಗೆ ಜಾನಪದ ಸಂಸ್ಕೃತಿಯ ಕೊಡುಗೆ ಅಪಾರ. ಎಲ್ಲಾ ರೀತಿಯ ಸಂಗೀತ ಸಾಹಿತ್ಯ ಕಲೆಗಳಿಗೆ ಜಾನಪದವೇ ತಾಯಿ ಬೇರು. ಜಾನಪದಕ್ಕೆ ನೈತಿಕ ಮತ್ತು ಜಾತ್ಯತೀತ ಮನೋಭಾವನೆಯನ್ನು ಬೆಳೆಸುವ ಶಕ್ತಿ ಇದೆ, ಇದು ಮನಸ್ಸಿಗೆ ಶಾಂತಿ ಮತ್ತು ಮನರಂಜನೆ ನೀಡುವುದಲ್ಲದೆ ಪ್ರತಿಯೊಬ್ಬರಲ್ಲೂ ಸಾಮಾಜಿಕ ಪ್ರಜ್ಞೆ ಬೆಳೆಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಜಾಪ ತಾಲೂಕು ಅಧ್ಯಕ್ಷ ಕುನ್ನಳ್ಳಿ ರವಿ ವಹಿಸಿದ್ದರು. ಸಾಹಿತಿ ನಾಗರಾಜ್, ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಭಾಲಕೃಷ್ಣ, ಕಸಾಪ ಅಧ್ಯಕ್ಷ ಡಿ.ಕೆ.ಲಕ್ಷ್ಮಣ್‍ಗೌಡ, ಮಾಜಿ ಅಧ್ಯಕ್ಷ ಶಾಂತಕುಮಾರ್, ಮಗ್ಗಲಮಕ್ಕಿ ಗಣೇಶ್, ಹೊರಟಿ ರಘು, ಚಂದ್ರೇಗೌಡ, ಸುಬ್ರಹ್ಮಣ್ಯ ಹಾಲೂರು, ಮಾಜಿ ಅಧ್ಯಕ್ಷ ಶಾಂತಕುಮಾರ್, ದೀಪಿಕಾ, ಕೋಮರಾಜು, ಚಂದ್ರೇಶ, ಲೋಕೇಶ್ ಉಪಸ್ಥಿತರಿದ್ದರು.


