suddi-9

 

 

ಮೂಡಿಗೆರೆ  ತಾಲ್ಲೂಕು ಜನ್ನಾಪುರ ಜೆಸಿಐ ಸಂಸ್ಥೆಯ ವತಿಯಿಂದ ಸಮಾಜಮುಖಿ ಸೇವೆಯ ಅಂಗವಾಗಿ ಆಯೋಜಿಸಲಾದ ಬೃಹತ್ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ಯುವಕರು, ಸಾರ್ವಜನಿಕರು ಹಾಗೂ ಜೆಸಿಐ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಿದರು.

ಜೆಸಿಐ ಜನ್ನಾಪುರ ಸಮೃದ್ಧಿ ವತಿಯಿಂದ ಬೃಹತ್ ರಕ್ತದಾನ ಶಿಬಿರವನ್ನು ಕೆ ಅರ್ ಎಸ್ ಆಸ್ಪತ್ರೆ ಮತ್ತು ಅರಳಗುಪ್ಪೆ ಮಲ್ಲೇಗೌಡ ಆಸ್ಪತ್ರೆಯ ತಜ್ಞ ವೈದ್ಯಧಿಕಾರಿಗಳದ ಡಾ. ಭರತ್ ಹಾಗೂ ವೈದ್ಯಕೀಯ ಸಿಬ್ಬಂದಿಯ ಮೇಲ್ವಿಚಾರಣೆಯಲ್ಲಿ ಸುರಕ್ಷಿತವಾಗಿ ನಡೆಸಲಾಯಿತು.

ರಕ್ತದಾನಕ್ಕೂ ಮುನ್ನ ದಾನಿಗಳ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ಮಾರ್ಗದರ್ಶನ ನೀಡಲಾಯಿತು. ಸಂಗ್ರಹವಾದ ರಕ್ತವನ್ನು ತುರ್ತು ಚಿಕಿತ್ಸೆಗೆ ಅಗತ್ಯವಿರುವ ರೋಗಿಗಳಿಗೆ ಹಾಗೂ ವಿವಿಧ ಆಸ್ಪತ್ರೆಗಳ ಮೂಲಕ ಬಳಸುವ ವ್ಯವಸ್ಥೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಜೆಸಿಐ ಅಧ್ಯಕ್ಷ ಪ್ರದೀಪ್ ಹೊಸಪುರ ಮಾತನಾಡಿ “ಒಬ್ಬ ರಕ್ತದಾನಿಯಿಂದ ಹಲವರ ಜೀವ ಉಳಿಯುವ ಸಾಧ್ಯತೆ ಇದೆ. ಆರೋಗ್ಯವಂತ ಪ್ರತಿಯೊಬ್ಬರೂ ವರ್ಷಕ್ಕೊಮ್ಮೆ ಅಥವಾ ವೈದ್ಯಕೀಯ ಮಾರ್ಗಸೂಚಿಯಂತೆ ನಿಯಮಿತವಾಗಿ ರಕ್ತದಾನ ಮಾಡುವ ಅಭ್ಯಾಸ ಬೆಳೆಸಬೇಕು” ಎಂದು ಕರೆ ನೀಡಿದರು.

ಶಿಬಿರದ ಯಶಸ್ಸಿಗೆ ಸಹಕರಿಸಿದ ಎಲ್ಲಾ ರಕ್ತದಾನಿಗಳು, ವೈದ್ಯಕೀಯ ಸಿಬ್ಬಂದಿ, ಸ್ವಯಂಸೇವಕರು, ಜೆಸಿಐ ಪದಾಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಸಂಸ್ಥೆಯ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು. ಸಮಾಜದಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಇಂತಹ ಸೇವಾ ಕಾರ್ಯಕ್ರಮಗಳನ್ನು ಮುಂದೆಯೂ ನಿರಂತರವಾಗಿ ಹಮ್ಮಿಕೊಳ್ಳಲಾಗುವುದು ಎಂದರು.

ಈ ರಕ್ತದಾನ ಸಂದರ್ಭದಲ್ಲಿ ಜನ್ನಾಪುರದ ಗಣಪತಿ ದೇವಸ್ಥಾನದ ಅರ್ಚಕರಾದ ರಮೇಶ್ ಬಟ್ ಅವರು ರಕ್ತದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾದರೂ ಈ ಶಿಬಿರದಲ್ಲಿ ಜೆಸಿಐ ಎಲ್ಲ ಸದಸ್ಯರು ಮತ್ತು ಕೆ ಅರ್ ಎಸ್ ಮತ್ತು ಚಿಕ್ಕಮಗಳೂರು ಆಸ್ಪತ್ರೆ ಸಿಬ್ಬಂದಿ ವರ್ಗದವರು, ಊರಿನ ಗ್ರಾಮಸ್ಥರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ