ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರ ಹಿಸಿ ನಗರದ ಆಜಾದ್‍ಪಾರ್ಕ್ ವೃತ್ತದಲ್ಲಿ ಗುರುವಾರ ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಬಾಲಕೃಷ್ಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿ ದಂತೆ ವಿವಿಧ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾಗಿರುವ ಕೇಂದ್ರದ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಶಿಕ್ಷಣ ಪ್ರೇಮಿ ಸೋನಮ್ ವಾಂಗ್ಕುಕರರನ್ನು ಹಾಗೂ ಅವರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಿ, ವಿದ್ಯಾರ್ಥೀಗಳ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಶಿಕ್ಷಣ ಸಚಿವರ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿ ದರು.
ಬಳಿಕ ಜಿಲ್ಲಾಡಳಿತ ಮೂಲಕ ಪ್ರಧಾನ ಮಂತ್ರಿಯವರಿಗೆ ದಸಂಸ ಮುಖಂಡರುಗಳು ಮನವಿ ಸಲ್ಲಿಸಿ ದರು. ಈ ಸಂದರ್ಭದಲ್ಲಿ ದಸಂಸ ಮುಖಂಡರುಗಳಾದ ಯೋಗೀಶ್, ಪ್ರಸನ್ನ, ಕೆ.ಕೆ.ಬಾಬು, ಉಮೇಶ್, ಗಿರೀಶ್, ವಸಂತ್, ಪವಿತ್ರ, ಸಿದ್ದಯ್ಯ, ಸತೀಶ್, ರವಿ, ಚಂದ್ರು ಮುಂತಾದವರು ಉಪಸ್ಥಿತರಿದ್ದರು.


