26Mudigere1A

 

 

ಮೂಡಿಗೆರೆ ತಾಲೂಕಿನ ಚಿನ್ನಿಗ ಸರಕಾರಿ ಪ್ರೌಢಶಾಲೆಯಲ್ಲಿ ಗಂಧದನಾಡು ಜನಪರ ವೇದಿಕೆ ವತಿಯಿಂದ ಶಾಲೆಯ ವಿದ್ಯಾರ್ಥಿಗಳಿಗೆ ಶನಿವಾರ ನೋಟ್ ಬುಕ್, ಪೆನ್ ಇತರ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗಂಧದನಾಡು ಜನಪರ ವೇದಿಕೆ ಸಂಸ್ಥಾಪಕ ಅಧ್ಯಕ್ಷ ವಿಜಯರಾಮ್ ಮಾತನಾಡಿ, ಸರಕಾರಿ ಶಾಲೆಯಲ್ಲಿ ಹೆಚ್ಚಾಗಿ ಬಡ ವಿದ್ಯಾರ್ಥಿಗಳು ಓದುವುದರಿಂದ ಪೋಷಕರ ಹೊರೆ ಸ್ವಲ್ಪಮಟ್ಟಿಗಾದರೂ ಇಳಿಸಬೇಕೆಂಬ ದೃಷ್ಟಿಯಿಂದ ಪ್ರತಿ ವರ್ಷ ನಮ್ಮ ವೇದಿಕೆಯಿಂದ ಒಂದು ಶಾಲೆ ಆಯ್ಕೆ ಮಾಡಿ, ಅಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅವಶ್ಯಕವಾದ ನೋಟ್ ಬುಕ್ ಪೆನ್ ಸೇರಿದಂತೆ ಇತರೇ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಎಸ್‍ಡಿಎಂಸಿ ಅಧ್ಯಕ್ಷ ಸುಂದ್ರೇಶ್ ಹೊಯ್ಸಳಲು ಮಾತನಾಡಿ, ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಸರಕಾರ ಅನೇಕ ಸವಲತ್ತು ನೀಡುತ್ತಿದೆ. ಇದರ ಜತೆಗೆ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳ ನೆರವಿಗೆ ಬಂದಾಗ, ವಿದ್ಯಾರ್ಥಿಗಳು ಶಿಕ್ಷಣ ಮೂಲಕ ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ವೇದಿಕೆ ರಾಜ್ಯಾಧ್ಯಕ್ಷೆ ಎಲ್.ಸಿ.ವಸಂತ ಕುಮಾರಿ, ತಾಲೂಕು ಅಧ್ಯಕ್ಷ ಪೂರ್ಣೇಶ್. ಕಾರ್ಯದರ್ಶಿ ದೇವರಾಜ್, ಹೊಬಳಿ ಅಧ್ಯಕ್ಷ ಚಂದ್ರಶೇಖರ, ಚಂದನ್ ಅನೆದಿಬ್ಬ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ