Madikeri

 

 

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೃಹತ್ ಮರ ಬಿದ್ದ ಪರಿಣಾಮ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.  ಕೊಡಗು   ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪುರ ಸಮೀಪದ ಬಿಳಿಗೇರಿ ಗ್ರಾಮದಲ್ಲಿ ಬುಧವಾರ ಈ ದುರ್ಘಟನೆ ನಡೆದಿದೆ.

ಬಿಳಿಗೇರಿ ಗ್ರಾಮದ ಟಾಟಾ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ. ದಿನನಿತ್ಯದ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರ ಮೇಲೆ ಏಕಾಏಕಿ ಬೃಹತ್ ಮರ ಉರುಳಿ ಬಿದ್ದಿದೆ. ಪರಿಣಾಮ ಅಸ್ಸಾಂ ಮೂಲದ ಪರ್ಬಿನಾ ಖಾತುನ್ (29) ಹಾಗೂ ಅಲೆಮನ್ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರೊಂದಿಗೆ ಕೆಲಸ ಮಾಡುತ್ತಿದ್ದ ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಮಳೆಗಾಳಿಯಿಂದಾಗಿ ಬೃಹತ್ ಮರ ಏಕಾಏಕಿ ಉರುಳಿಬಿದ್ದಿದ್ದು, ಸಮೀಪದಲ್ಲಿಯೇ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆಯೇ ಬಿದ್ದಿದೆ. ಕಾರ್ಮಿಕರು ತಪ್ಪಿಸಿಕೊಳ್ಳುವ ಮುನ್ನವೇ ಮರ ಕಾರ್ಮಿಕರ ಮೇಲೆ ಮಗುಚಿ ಬಿದ್ದಿದೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸೋಮವಾರಪೇಟೆ ಪೊಲೀಸರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಗ್ಗೆ ಐದು ದಿನಗಳ ಹಿಂದೆ ಹಾಸನ ಜಿಲ್ಲೆ ಆಲೂರು ತಾಲ್ಲೂಕು ದಾಟೂರು ಎಂಬಲ್ಲಿ ಕಾಫಿ ತೋಟದಲ್ಲಿ ಮರಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದ ದುರ್ಘಟನೆ ನಡೆದಿತ್ತು. ಇದೀಗ ಮತ್ತಿ‍ಬ್ಬರು ಕಾರ್ಮಿಕರು ಮರಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ