October 30, 2026
;
suddi-17

 

 

ಮೂಡಿಗೆರೆ ತಾಲ್ಲೂಕು ಗೋಣಿಬಿಡು ರೋಟರಿ ಕ್ಲಬ್ ವತಿಯಿಂದ ಡಾಕ್ಟರ್ ಡೇ ಅಂಗವಾಗಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ ಆಲ್ದೂರಿನ ಖ್ಯಾತ ವೈದ್ಯರಾದ ಡಾ. ಪ್ರಸನ್ನ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಅಧ್ಯಕ್ಷ ಎನ್. ಕೆ ನಯನ್ ಮಾತನಾಡಿ ವೈದ್ಯಕೀಯ ಕ್ಷೇತ್ರದಲ್ಲಿ ಡಾ ಪ್ರಸನ್ನ ಕುಮಾರ್ ಶೆಟ್ಟಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ ಇಂದು ನಮ್ಮ ರೋಟರಿ ಸಂಸ್ಥೆ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಿ ಗೌರವಿಸಲಾಯಿತು. ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುತ್ತಿರುವ ಡಾ. ಶೆಟ್ಟಿಯವರ ಸೇವೆಯನ್ನು ಕಾರ್ಯಕ್ರಮದಲ್ಲಿ ಶ್ಲಾಘಿಸಿದರು.

ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಡಾ. ಪ್ರಸನ್ನ ಕುಮಾರ್ ಶೆಟ್ಟಿ, ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಅತ್ಯಂತ ಅಗತ್ಯ ಎಂದು ಹೇಳಿದರು. ನಿಯಮಿತ ವ್ಯಾಯಾಮ, ಸಮತೋಲಿತ ಆಹಾರ, ಸ್ವಚ್ಛತೆ ಪಾಲನೆ, ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಹಾಗೂ ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸಬಾರದು ಎಂದು ಸಲಹೆ ನೀಡಿದರು. ಬದಲಾಗುತ್ತಿರುವ ಜೀವನಶೈಲಿಯಿಂದ ಮಧುಮೇಹ, ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕೆಂದು ತಿಳಿಸಿದರು.

ಈ ಸನ್ಮಾನ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಪದಾಧಿಕಾರಿಗಳು, ಸದಸ್ಯರು ವೈದ್ಯರು, ಸಾರ್ವಜನಿಕರು ಹಾಗೂ ಗಣ್ಯರು ಉಪಸ್ಥಿತರಿದ್ದು, ಡಾಕ್ಟರ್ ಡೇ ಅಂಗವಾಗಿ ವೈದ್ಯರ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು.

 

 

 

Leave a Reply

Your email address will not be published. Required fields are marked *