suddi-18

 

 

ಮೂಡಿಗೆರೆ ತಾಲ್ಲೂಕು ಗೋಣಿಬೀಡು ಮಾತೃಶ್ರೀ ಲಯನ್ಸ್ ಕ್ಲಬ್‍ನ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ಗೊಣಿಬೀಡಿನಲ್ಲಿ ನಡೆಯಿತು.  ಕ್ಲಬ್‍ನ ನೂತನ ಅಧ್ಯಕ್ಷರಾಗಿ ಲಯನ್ಸ್ ನಾಗರಾಜ್ ಅವರನ್ನು ಹಾಗೂ ಕಾರ್ಯದರ್ಶಿಯಾಗಿ ವಿಶ್ವಾಸ್ ಗೌಡ ಅವರು ಅಧಿಕಾರ ವಹಿಸಿಕೊಂಡರು.

ನೂತನ ಅಧ್ಯಕ್ಷ ನಾಗರಾಜ್ ಸಭೆಯಲ್ಲಿ ಮಾತನಾಡಿ ಲಯನ್ಸ್ ಕ್ಲಬ್ ಸಮಾಜಮುಖಿ ಚಟುವಟಿಕೆಗಳ ಮೂಲಕ ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕ ಸೇವಾ ಕಾರ್ಯಕ್ರಮಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಹೊಸ ತಂಡದ ನೇತೃತ್ವದಲ್ಲಿ ಇನ್ನಷ್ಟು ಪರಿಣಾಮಕಾರಿ ಸೇವಾ ಕಾರ್ಯಗಳು ನಡೆಯಲಿವೆ ಎಂದು ವಿಶ್ವಾಸ ಅಶ್ವಾಸನೆ ವ್ಯಕ್ತಪಡಿಸಿದರು. ಸದಸ್ಯರ ಸಹಕಾರದೊಂದಿಗೆ ಗ್ರಾಮೀಣ ಭಾಗದ ಜನರಿಗೆ ಉಪಯುಕ್ತವಾಗುವ ವಿವಿಧ ಸೇವಾ ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಗುವುದು ಎಂದರು. ಕಾರ್ಯದರ್ಶಿ ವಿಶ್ವಾಸ್ ಗೌಡ ಅವರು ಕ್ಲಬ್‍ನ ಚಟುವಟಿಕೆಗಳನ್ನು ಇನ್ನಷ್ಟು ಸಂಘಟಿತವಾಗಿ ನಡೆಸಿ ಯುವಜನರನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.

ಈ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರ ಪದಗ್ರಹಣದ ಸಭೆಯಲ್ಲಿ ಕ್ಲಬ್‍ನ ಸದಸ್ಯರು, ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ