80ನೇ ಸ್ವಾತಂತ್ರೋತ್ಸವದ ಅಂಗವಾಗಿ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಸ್ವಾತಂತ್ರೋತ್ಸವ ವಿಶೇಷ ವಸ್ತು ಪ್ರದರ್ಶನ ನಡೆಯಲಿದೆ.
ಆಗಸ್ಟ್ 14 ರಿಂದ 16ರವರೆಗೆ ಬೆಳಿಗ್ಗೆ 10-30 ರಿಂದ ಸಂಜೆ 5-30ರವರೆಗೆ ವಸ್ತುಪ್ರದರ್ಶನ ನಡೆಯಲಿದ್ದು ಸ್ವಾತಂತ್ರ ಸಂಗ್ರಾಮಕ್ಕೆ ಸಂಬಂಧಿಸಿದ ವಿಶೇಷ ಅಂಚೆ ಚೀಟಿಗಳು, ತಾಮ್ರಪತ್ರ, ಪದಕ, ರಿಸರ್ವ್ ಬ್ಯಾಂಕ್ ಆಪ್ ಇಂಡಿಯಾ ಮುದ್ರಿಸಿರುವ ಬೆಳ್ಳಿಯ ನಾಣ್ಯಗಳು, ವಂದೇ ಮಾತರಂ 150ನೇ ವರ್ಷಾಚರಣೆ, ಜಲಿಯನ್ ವಾಲಾಬಾಗ್ 100ನೇ ವರ್ಷಾಚರಣೆಯ ನೆನಪಿನ ವಿಶೇಷ ನಾಣ್ಯಗಳು, ಮಹಾತ್ಮ ಗಾಂಧೀಜಿ, ನೆಹರು, ಅಂಬೇಡ್ಕರ್, ಲಾಲ್ ಬಹದ್ದೂರ್ ಶಾಸ್ತ್ರೀ, ಸುಭಾಷಚಂದ್ರ ಬೋಸ್, ಭಗತ್ ಸಿಂಗ್ ಶತಾಭ್ದಿ ನಾಣ್ಯ, ಸ್ವಾತಂತ್ರ ಹೋರಾಟಕ್ಕೆ ಸಂಬಂಧಿಸಿದ ಕನ್ನಡ ಮತ್ತು ಇಂಗ್ಲೀಷ್ ಪುಸ್ತಕಗಳು ಪ್ರದರ್ಶನದಲ್ಲಿ ಇರಲಿದೆ.
ಪ್ರದರ್ಶನಕ್ಕೆ ಉಚಿತ ಪ್ರವೇಶವಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಇದರ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


