November 3, 2026
;
10Mudigere1A

 

 

ಮೂಡಿಗೆರೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷರಾಗಿ ಸಿ.ಬಿ.ಶಂಕರ್ ಚಿಕ್ಕಳ್ಳ  ಅವರು ನೇಮಕಗೊಂಡಿದ್ದು, ಸೋಮವಾರ ತಾ.ಪಂ. ಸಭಾಂಗಣದಲ್ಲಿ ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ಗೋಣಿಬೀಡು ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಎ.ಜಿ.ಸುಬ್ರಾಯಗೌಡ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರು, ಮಧ್ಯಮ ವರ್ಗ, ಮಹಿಳೆಯರು, ಯುವಕರು ಹಾಗೂ ದುಡಿಯುವ ವರ್ಗದ ಜನರಿಗೆ ಸಾಕಷ್ಟು ನೆರವು ನೀಡುತ್ತಿವೆ. ಈ ಹಿಂದಿನ ಅಧ್ಯಕ್ಷರಾದ ಬಿ.ಎಸ್.ಜಯರಾಂ ಅವರು  ಈ ಯೋಜನೆಗಳ ನಿಜವಾದ ಉದ್ದೇಶ, ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಯಶಸ್ವಿ ಕಂಡಿದ್ದರು. ಇದೀಗ  ಈ ಜವಾಬ್ದಾರಿಯನ್ನು ಸಿ.ಬಿ.ಶಂಕರ್ ಅವರಿಗೆ ವಹಿಸಿರುವುದು ಅವರ ಮೇಲಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ನೂತನ ಅಧ್ಯಕ್ಷ ಸಿ.ಬಿ.ಶಂಕರ್ ಮಾತನಾಡಿ, ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಪರಿಶೀಲಿಸುವುದು, ಫಲಾನುಭವಿಗಳ ಸಮಸ್ಯೆಗಳನ್ನು ಆಲಿಸುವುದು, ಅರ್ಹರಿಗೆ ಯೋಜನೆಗಳ ಸೌಲಭ್ಯ ದೊರೆಯುವಂತೆ ಮಾಡಲು ತನಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ಮುಖಂಡರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಸ್ನೇಹಿತರು ಶಂಕರ್ ಅವರನ್ನು ಅಭಿನಂದಿಸಿದರು.

ನೂತನ ಅಧ್ಯಕ್ಷ ಸಿ.ಬಿ. ಶಂಕರ್ ಅವರು ಮೂಡಿಗೆರೆ ತಾಲ್ಲೂಕು ಚಿಕ್ಕಳ್ಳ ಗ್ರಾಮದವರಾಗಿದ್ದು, ಅನೇಕ ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದು, ಪ್ರಸ್ತುತ ಕಸಬಾ ಹೋಬಳಿ ಕಾಂಗ್ರೇಸ್ ಅಧ್ಯಕ್ಷರಾಗಿದ್ದಾರೆ. ಅಪಾರ ಸ್ನೇಹಿತ ಬಳಗವನ್ನು ಹೊಂದಿದ್ದಾರೆ.

 

 

Leave a Reply

Your email address will not be published. Required fields are marked *