August 16, 2026
samse iti

 

 

ಕಳಸ ತಾಲ್ಲೂಕು ಸಂಸೆ ಗ್ರಾಮದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯು (SDM ITI, Samse) ಇತ್ತೀಚೆಗೆ ಪ್ರಕಟಗೊಂಡ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ (AITT) ನೂರಕ್ಕೆ ನೂರರಷ್ಟು (100%) ಅತ್ಯುತ್ತಮ ಫಲಿತಾಂಶ ದಾಖಲಿಸಿರುವುದಕ್ಕೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಂಸೆಯ ಸ್ಥಳೀಯ ಸಾರ್ವಜನಿಕರು ತೀವ್ರ ಹರ್ಷ ವ್ಯಕ್ತಪಡಿಸಿದ್ದು, ಸಂಸ್ಥೆಯ ಆಡಳಿತ ಮಂಡಳಿ ಮತ್ತು ಬೋಧಕ ವರ್ಗಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣ ಹಾಗೂ ಅತ್ಯುತ್ತಮ ಶಿಸ್ತನ್ನು ಧಾರೆ ಎರೆಯುತ್ತಿರುವ ಸಂಸೆ ಐ.ಟಿ.ಐ, ಈ ಬಾರಿಯೂ ತನ್ನ ಯಶಸ್ಸಿನ ಪರಂಪರೆಯನ್ನು ಮುಂದುವರಿಸಿರುವುದು ಇಡೀ ಭಾಗಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಸ್ಥಳೀಯ ಪ್ರಮುಖರು ಶ್ಲಾಘಿಸಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉದ್ಯೋಗ ಮಾರುಕಟ್ಟೆಗೆ ಸೌಹಾರ್ದಯುತವಾಗಿ ಸಿದ್ಧಪಡಿಸುತ್ತಿರುವ ಸಂಸ್ಥೆಯ ಕಾರ್ಯವೈಖರಿ ನಿಜಕ್ಕೂ ಹೆಮ್ಮೆಯ ತರುವಂತದ್ದಾಗಿದೆ ಎಂದು ಪೋಷಕರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಈ ಭವ್ಯ ಯಶಸ್ಸಿಗೆ ಕಾರಣರಾದ ಸಂಸ್ಥೆಯ *ಕಾರ್ಯದರ್ಶಿಗಳು*, ಪ್ರಾಂಶುಪಾಲರು, ತರಬೇತಿ ಅಧಿಕಾರಿಗಳು ಹಾಗೂ ಸಮಸ್ತ  ಸಿಬ್ಬಂದಿ ವರ್ಗದವರ ನಿರಂತರ ಶ್ರಮ ಮತ್ತು ಪ್ರೀತಿಪೂರ್ವಕ ಮಾರ್ಗದರ್ಶನವನ್ನು ಪೋಷಕರು ಹಾಗೂ ಸ್ಥಳೀಯ ಹಿತೈಷಿಗಳು ಮುಕ್ತಕಂಠದಿಂದ ಶ್ಲಾಘಿಸಿ, ಸಂಸ್ಥೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದ್ದಾರೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ