August 16, 2026
IMG-20260814-WA0067

 

 

ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ಕೆ ಎ ರವಿ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ

ಬಿ.ಕೆ. ಹರಿಪ್ರಸಾದ್ ಅವರು ಮಾಡಿರುವ ಆದೇಶ ಪತ್ರದಲ್ಲಿ ಈ ಕೆಳಕಂಡಂತೆ ಉಲ್ಲೇಖಿಸಲಾಗಿದೆ

ಕೆ. ಎ. ರವಿ

ಪ್ರಸ್ತುತ ಸಂಘಟನ್ ಸೃಜನ್ ಅಭಿಯಾನ ಕಾರ್ಯಕ್ರಮ ನೆಡೆಯುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರನ್ನಾಗಿ ಶ್ರೀ ಕೆ.ಎ. ರವಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಶ್ರೀ ಕೆ.ಎ. ರವಿ ಅವರು ತಕ್ಷಣ ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ. ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ಸಿಗಲೆಂದು ಹಾರೈಸುತ್ತೇನೆ.

ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಸ್ತುತ ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹೆಚ್.ಜಿ ಸುರೇಂದ್ರ ಅವರು ಕಾರ್ಯನಿರ್ವಹಿಸುತ್ತಿದ್ದರು. ಆದರೆ ಈಗ ಕೆಪಿಸಿಸಿ ಅಧ್ಯಕ್ಷರು ದಿಢೀರ್ ಎಂದು ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಂಗಾಮಿ ಅಧ್ಯಕ್ಷರನ್ನಾಗಿ ಕೆ.ಎ ರವಿಯವರನ್ನು ನೇಮಕ ಮಾಡಿ ಆದೇಶ ಹೊರಡಿಸಿರುವುದು ಮೂಡಿಗೆರೆ ಕಾಂಗ್ರೇಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಮೂಡಿಗೆರೆ ಕಾಂಗ್ರೆಸ್ ನಲ್ಲಿ ಕಳೆದ ಕೆಲ ದಿನಗಳಿಂದ ಶಾಸಕರ ಪರ ಮತ್ತು ವಿರುದ್ಧ ಎರಡು ತಂಡಗಳಾಗಿ ವಿಭಜನೆಯಾಗಿದ್ದು ಪರಸ್ಪರರು ಆರೋಪ ಪ್ರತ್ಯಾರೋಪ ಮಾಡುತ್ತಾ ಬರುತ್ತಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹೆಚ್ ಜಿ ಸುರೇಂದ್ರ ಸೇರಿದಂತೆ ಅನೇಕ ಹಿರಿಯ ಮುಖಂಡರು ಶಾಸಕಿ ನಯನ ಮೋಟಮ್ಮ ಅವರ ವಿರುದ್ಧ ಕೆಪಿಸಿಸಿ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದರು.

ಇದಕ್ಕೆ ಪ್ರತಿಯಾಗಿ ಶಾಸಕರ ಬೆಂಬಲಿತ ನಾಯಕರು ಹಾಗೂ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕೆಪಿಸಿಸಿ ಅಧ್ಯಕ್ಷರು ಮತ್ತು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಶಾಸಕಿ ನಯನ ಮೋಟಮ್ಮ ಪರವಾಗಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದರು.

ಶಾಸಕಿ ನಯನ ಮೋಟಮ್ಮ ಅವರ ಪರವಾದ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಕೆ.ಎ ರವಿ ಅವರನ್ನು ಇದೀಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ರವಿ ಅವರು ಮೂಡಿಗೆರೆ ಸಮೀಪದ ಕುನ್ನಹಳ್ಳಿ ಗ್ರಾಮದವರಾಗಿದ್ದು ಹಲವು ವರ್ಷ ಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಮೂಡಿಗೆರೆ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಾಗಿಯು ಕಾರ್ಯನಿರ್ವಹಿಸುತ್ತಿದ್ದಾರೆ.

ರವಿಯವರಿಗೆ ಶಾಸಕಿ ನಯನಾ ಮೋಟಮ್ಮ ಅವರು ತಮ್ಮ ಗೃಹ ಕಛೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ಆದೇಶ ಪ್ರತಿಯನ್ನು  ನೀಡಿದ್ದಾರೆ.  ಈ ಸಂದರ್ಭದಲ್ಲಿ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ, ಗ್ಯಾರಂಟಿ ಸಮಿತಿ ಅಧ್ಯಕ್ಷ ಸಿ.ಬಿ.ಶಂಕರ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಹಾಲಿ ಅಧ್ಯಕ್ಷರಿಗೆ ಕಾರಣ ಕೇಳಿ ನೋಟೀಸ್

ಇದೇ ಸಂದರ್ಭದಲ್ಲಿ ಹಾಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಹೆಚ್.ಜಿ.ಸುರೇಂದ್ರ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.

ಪಕ್ಷದ ನಿಯಮಗಳನ್ನು ಪಾಲಿಸದೇ, ಸ್ಥಳೀಯ ಶಾಸಕರು ಮತ್ತು ಹಿರಿಯ ಮುಖಂಡರ ಗಮನಕ್ಕೆ ಬಾರದೇ ಪರ್ಯಾಯ ಸಭೆಗಳನ್ನು ನಡೆಸುವುದು, ಪಕ್ಷದ ಶಾಸಕರ ವಿರುದ್ಧವೇ ಬಹಿರಂಗವಾಗಿ ಟೀಕೆ ಮಾಡಿರುವುದು ಮತ್ತು ಮಾಧ್ಯಮ ಹೇಳಿಕೆಗಳನ್ನು ನೀಡಿರುವುದು ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಒಂದು ವಾರದ ಒಳಗಾಗಿ ನೋಟಿಸ್ ಉತ್ತರ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ