August 16, 2026
dfafa

ಹೃದಯಾಘಾತದಿಂದ 26 ವರ್ಷದ ಯುವಕ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವಾಸಿತಾಣ ದೇವರಮನೆ ಗುಡ್ಡದಲ್ಲಿ ನಡೆದಿದೆ.

ಮೃತನನ್ನ 26 ವರ್ಷದ ನರೇಶ್ ಎಂದು ಗುರುತಿಸಲಾಗಿದೆ. ಮೃತ ನರೇಶ್ ಮೂಲತಃ ಕಲಬುರುಗಿ ಜಿಲ್ಲೆಯವರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರು.  ಸ್ನೇಹಿತರ ಜೊತೆ ಬೆಂಗಳೂರಿನಿಂದ ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡ ಪ್ರವಾಸಿ  ತಾಣಕ್ಕೆ ಪ್ರವಾಸ ಬಂದಿದ್ದರು.

ದೇವರಮನೆ ಗುಡ್ಡದ ಸೌಂದರ್ಯ ಸವಿದು ಹಿಂದಿರುಗುವಾಗ ರಸ್ತೆ ಮಧ್ಯೆ ತುಂತುರು ಮಳೆ ಹಾಗೂ ಚಳಿ ಎಂದು ಕೋಟ್ ಹಾಕಿಕೊಳ್ಳಲು ಬೈಕ್ ನಿಲ್ಲಿಸಿದ್ದಾರೆ. ಕೋಟ್ ಹಾಕಿಕೊಳ್ಳುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕುಸಿದು ಬಿದ್ದ. ನರೇಶ್ ರನ್ನ ಸ್ಥಳಿಯರು ಹಾಗೂ ಜೊತೆಗಿದ್ದ ಸ್ನೇಹಿತರು ಸ್ಥಳಿಯ ಸಮಾಜ ಸೇವಕ, ಆಂಬುಲೆನ್ಸ್ ಚಾಲಕ ಆರೀಫ್ ನೇತೃತ್ವದಲ್ಲಿ ಕೂಡಲೇ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ನರೇಶ್ ಸಾವನ್ನಪ್ಪಿದ್ದಾರೆ. ಜೊತೆಗೆ ಬಂದ ಸ್ನೇಹಿತನ ಸಾವು‌ ಕಂಡು ನರೇಶ್ ಸ್ನೇಹಿತರು ಕಣ್ಣೀರಿಟ್ಟಿದ್ದಾರೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ