August 24, 2026
;
suddi-1

 

 

ವಿದ್ಯಾರ್ಥಿಗಳು  ಶ್ರದ್ದೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಬೇಕು ಎಂದು ಬಸವ ತತ್ವ ಪೀಠದ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಸಲಹೆ ಮಾಡಿದರು.

ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕ ಚಿಕ್ಕಮಗಳೂರು ನಗರದ ಎಐಟಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಜಿಲ್ಲೆಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಎ ಐ ಟಿ ಪ್ರಾಂಶುಪಾಲ ಡಾ ಎಂ.ಎ. ಗೌತಮ್ ಮಾತನಾಡಿ ಅತಿ ಹೆಚ್ಚು ಅಂಕ ಗಳಿಸಿ ಶಿಕ್ಷಣವಂತರಾಗುವುದರಿಂದ ಉದ್ಯೋಗ ದೊರೆಯುವುದಿಲ್ಲ, ಅದರ ಜೊತೆಗೆ ಉತ್ತಮ ಕೌಶಲ್ಯವಿದ್ದರೆ ಮಾತ್ರ ಉದ್ಯೋಗ ದೊರೆಯುತ್ತದೆ, ಹಾಗಾಗಿ ವಿದ್ಯಾರ್ಥಿಗಳು ಪ್ರತಿ ದಿನ ಕಲಿಯಬೇಕು, ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು,ಒಳ್ಳೆಯ ಹವ್ಯಾಸಗಳನ್ನು ರೂಡಿಸಿಕೊಂಡು ಉತ್ತಮ ನಾಗರೀಕರಾಗಬೇಕು ಎಂದು ಸಲಹೆ ಮಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು, ಕಳೆದ ಏಳು ವರ್ಷಗಳಿಂದ ರಾಜ್ಯ ಸಂಘದ ಸಹಕಾರದೊಂದಿಗೆ ಜಿಲ್ಲೆಯ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಕ್ಕಳನ್ನು ಶಿಕ್ಷಣಕ್ಕೆ ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ಕಳೆದ 12 ವರ್ಷಗಳಿಂದ ರಾಜ್ಯದ 60 ಸಾವಿರದಷ್ಟು ವಿದ್ಯಾರ್ಥಿಗಳಿಗೆ ಸಂಘದಿಂದ ಪ್ರತಿಭಾ ಪುರಸ್ಕಾರ ಮಾಡಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಮಿತಿಯಿಂದ ನಗರದಲ್ಲಿ ನಿರ್ಮಿಸುತ್ತಿರುವ ಸಮುದಾಯ ಭವನಕ್ಕೆ ಎಲ್ಲರೂ ಹೆಚ್ಚಿನ ಸಹಕಾರ ನೀಡುವಂತೆ ಮನವಿ ಮಾಡಿದರು.

ಮಂಕುತಿಮ್ಮನ ಕಗ್ಗ ಪ್ರವಚನ ಖ್ಯಾತಿಯ ವಾಗ್ಮಿ ಜಿ.ಎಸ್.ನಟೇಶ್ ಪ್ರೇರಣಾ ನುಡಿಗಳನ್ನಾಡಿದರು, ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಲೋಕೇಶ್ ಮಾತನಾಡಿದರು.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ 273 ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ತಲಾ ಎರಡು ಸಾವಿರ ರೂ ನಗದು ನೀಡಿ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಹಿರಿಯ ಉಪಾಧ್ಯಕ್ಷ ಸೋಮಶೇಖರಯ್ಯ, ಪ್ರಧಾನ ಕಾರ್ಯದರ್ಶಿ ಎಸ್.ಬಸವರಾಜು, ಜಿಲ್ಲಾ ಕಾರ್ಯಾಧ್ಯಕ್ಷ ಬಿ.ಎನ್.ಸುಂದರೇಶ್, ಗೌರವಾಧ್ಯಕ್ಷ ಬಿ.ಎಂ.ಉಮೇಶ್, ರಾಜ್ಯ ಪರಿಷತ್ ಸದಸ್ಯ ಕೆ.ಸಿ.ಮಂಜುನಾಥ್, ಕಾರ್ಯದರ್ಶಿ ಟಿ.ಪದ್ಮರಾಜು, ಖಜಾಂಚಿ ಎಸ್.ಟಿ.ಪೂರ್ಣೇಶ್, ತರೀಕೆರೆ ತಾಲೂಕು ಅಧ್ಯಕ್ಷ ಅನಂತ್, ಶೃಂಗೇರಿ ತಾಲೂಕು ಅಧ್ಯಕ್ಷ ಬಿ.ಜಿ.ನಾಗೇಶ್, ಅಜ್ಜಂಪುರ ಅಧ್ಯಕ್ಷ ಎಸ್.ಎಂ. ಪುಟ್ಟಸ್ವಾಮಿ, ಎನ್ ಆರ್ ಪುರದ ಎನ್. ಎಲ್. ಮುನೀಶ್, ಕಡೂರು ತಾಲೂಕು ಅಧ್ಯಕ್ಷ ಮಂಜುನಾಥ್ ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;