ಮೂಡಿಗೆರೆ ಪಟ್ಟಣದ ಕೆ.ಎಂ. ರಸ್ತೆಯ ಮಟನ್ ಮಾರ್ಕೆಟ್ ಮುಂಬಾಗದ ರಸ್ತೆ ಬಾರಿ ಗುಂಡಿಗಳು ನಿರ್ಮಾಣವಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು.
ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಆಗುತ್ತಿತ್ತು. ಇದನ್ನು ಮನಗಂಡ ಇಬ್ಬರು ಖಾಸಗಿ ವ್ಯಕ್ತಿಗಳು ಕಾಂಕ್ರೀಟ್ ಹಾಕಿ ರಸ್ತೆ ಗುಂಡಿ ಮುಚ್ಚುವ ಮೂಲಕ ಸಾರ್ವಜನಿಕ ಕಾಳಜಿಯನ್ನು ತೋರ್ಪಡಿಸಿದ್ದಾರೆ.

ಮೂಡಿಗೆರೆ ಸಮೀಪದ ಕೃಷ್ಣಾಪುರದ ಹಾರ್ಡ್ ವೇರ್ ಮಾಲೀಕ ಆಲ್ ಮಜೀದ್ ಹಾಗೂ ನೂರ ಗೋಲ್ಡ್ ಬೆಳ್ತಂಗಡಿ ಮಾಲೀಕರು ಸೇರಿ ಸಂಪೂರ್ಣ ಕಾಂಕ್ರೀಟ್ ಹಾಕಿ ಗುಂಡಿಗಳನ್ನು ಮುಚ್ಚಿಸಿದ್ದಾರೆ.
ಸುಮಾರು ಹತ್ತು ಮೀಟರ್ ಉದ್ದ ಮತ್ತು ಅಗಲದ ಜಾಗಕ್ಕೆ ಒಂದು ಲಕ್ಷಕ್ಕೂ ಅಧಿಕ ಮೊತ್ತ ವೆಚ್ಚಮಾಡಿ ಗುಣಮಟ್ಟದ ಕಾಂಕ್ರೀಟ್ ಹಾಕಿ ರಸ್ತೆಯ ಗುಂಡಿಗಳನ್ನು ಮುಚ್ಚಿದ್ದಾರೆ.
ಇವರ ಕಾರ್ಯಕ್ಕೆ ಮೂಡಿಗೆರೆ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಾಮಾಜಿಕ ಸಕ್ರಿಯ ಸೇವಾ ಸಂಸ್ಥೆ ತಂಡದವರೂ ಸಾರ್ವಜನಿಕರ ವತಿಯಿಂದ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕಾಮಗಾರಿ ನಡೆಯುವ ಸಂದರ್ಭದಲ್ಲಿ ಮೂಡಿಗೆರೆ ಪೊಲೀಸರು ಸ್ಥಳದಲ್ಲಿ ಬ್ಯಾರಿಕೇಡ್ ಹಾಕಿ ಸುಗಮ ಕಾಮಗಾರಿ ನಡೆಯಲು ಹಾಗೂ ಸಂಚಾರ ವ್ಯವಸ್ಥೆಗೆ ಅವಕಾಶ ಮಾಡಿಕೊಟ್ಟಿದ್ದರು.



