August 21, 2026
;
kodagu aane

 

 

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಶಿಲ್ಪಿ ಎಸ್ಟೇಟ್‌ನಲ್ಲಿ ನಡೆದಿದೆ.

ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ದಾಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಗೋಪಾಲನ್ ಪಾವರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಕಾರ್ಮಿಕ ಜಾದವ್ ಪಾವರಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾಫಿಬೆಳೆಯುವ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಗೆ ನಿರಂತರ ಜೀವ ಬಲಿಯಾಗುತ್ತಿವೆ. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಮರೀಚಿಕೆಯಾಗಿಯೇ ಉಳಿದಿದೆ.

ಕಾಡಾನೆ ದಾಳಿಯಿಂದ ಕಾರ್ಮಿಕ ಬಲಿಯಾದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;