August 21, 2026
;
agathya

 

 

ಸೇಂಟ್ ಮಿಲಾ ಗ್ರೀಸ್ ಕ್ರೆಡಿಟ್ ಸೌಹಾರ್ದ ಕೋ ಅಪ್ ಸೊಸೈಟಿ ಮುಡಿಗೆರೆ ಮತ್ತು ಜಿಜೆಎಸ್ ನ ಎಸ್ ಆರ್ ಸಿ ವಿಭಾಗದ ವಿಶೇಷ ಚೇತನ ಮಕ್ಕಳಿಗೆ 80ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಅಗತ್ಯ ವಸ್ತುಗಳ ವಿತರಣಾ ಕಾರ್ಯಕ್ರಮ ಶಾಲಾ ಆವರಣದಲ್ಲಿ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಖೆಯ ವ್ಯವಸ್ಥಾಪಕರಾದ ಶಿವಶಂಕರ್ ರವರು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಮಾತನಾಡಿದ ನವೀನ್ ಆನೆದಿಬ್ಬ ಅವರು, ಮಕ್ಕಳಿಗೆ ಹಾಗೂ ಪೋಷಕರಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ವಿವರಿಸಿದರು.

ಸಮಾಜ ಸೇವೆಯಲ್ಲಿ ಸಂಘ-ಸಂಸ್ಥೆಗಳು ಮಹತ್ವದ ಪಾತ್ರ ವಹಿಸುತ್ತಿದ್ದು, ಸಮಾಜದ ಅಭಿವೃದ್ಧಿಗೆ ಅವುಗಳ ಕೊಡುಗೆ ಅಪಾರವಾಗಿದೆ ಎಂದರು. ವಿಶೇಷವಾಗಿ ಮಕ್ಕಳಲ್ಲಿ ಮಾನಸಿಕ ಸ್ಥಿರತೆ, ತಾಳ್ಮೆ ಹಾಗೂ ಆತ್ಮವಿಶ್ವಾಸದಂತಹ ಉತ್ತಮ ಗುಣಗಳನ್ನು ಬೆಳೆಸುವ ಅಗತ್ಯವಿದೆ ಎಂದು ತಿಳಿಸಿದರು.

ಮಕ್ಕಳಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸಿ, ಅವರಿಗೆ ಅಗತ್ಯವಾದ ಪ್ರೋತ್ಸಾಹ ಮತ್ತು ಸಹಕಾರ ನೀಡಿದರೆ, ಅವರ ಶೈಕ್ಷಣಿಕ ಹಾಗೂ ವೈಯಕ್ತಿಕ ಬೆಳವಣಿಗೆಗೆ ಹೆಚ್ಚಿನ ನೆರವಾಗುತ್ತದೆ ಎಂದು ನವೀನ್ ಆನೆದಿಬ್ಬ ಅವರು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿ ಪಿಪಿ ನಾರಾಯಣ್ ರವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಭಕ್ತಿಯ ಆದರ್ಶಗಳನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಸಂಸ್ಥೆಯ ಕೆಲಸ ಕಾರ್ಯಗಳನ್ನು ಶ್ಲಾಘಿಸಿದರು

ಅಧ್ಯಕ್ಷತೆಯನ್ನು ವಹಿಸಿದ್ದ ಶಿವಶಂಕರ್ ರವರು ಮಾತನಾಡಿ  ಸೇವೆ ಮಾಡಲು ಸಹಕರಿಸಿದಂತಹ ಎಲ್ಲರಿಗೆ ಧನ್ಯವಾದಗಳು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ನಾವೆಲ್ಲರೂ ಒಂದಾಗೋಣ ಎಂದರು

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಸ್ಥರಾದ ಸುರೇಶ್ HG ಥೆರಪಿಸ್ಟ್ರಾರಾದ ಡಾಕ್ಟರ್ ಸಾದಿಯ ಸಿಬ್ಬಂದಿಗಳಾದ ರೂಪ ಭೂಮಿಕ ರಂಜಿನಿ ಸಚಿನ್ ಜೀವನ್ ಶಿಕ್ಷಕರಾದ ಚಂದ್ರಶೆಟ್ಟಿ ವಿದ್ಯಾರ್ಥಿಗಳು ಮತ್ತು ಪೋಷಕರು ಹಾಜರಿದ್ದರು

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;