August 21, 2026
;

 

 

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಆಗಸ್ಟ್ 28 ರಿಂದ 31 ದಿನಗಳ ಎಂಬ್ರಾಡರಿ, ಸೆಪ್ಟೆಂಬರ್ 15 ರಂದು 10 ದಿನಗಳ ಕಾಲ ಅಣಬೆ ಕೃಷಿ ಸೆಪ್ಟೆಂಬರ್ 28 ರಿಂದ 13 ದಿನಗಳ ಸಿಸಿಟಿವಿ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದು.

ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9481506564, 9380162042, 9241482541, 9113880324 ಅನ್ನು ಸಂಪರ್ಕಿಸಬಹುದು ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ಗಿರಿಧರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;