ಕಾಫಿ ಮಂಡಳಿಯಿಂದ 2026-2027 ನೇ ಶೈಕ್ಷಣಿಕ ಸಾಲಿಗೆ ಕಾಫಿ ತೋಟದಲ್ಲಿ ಹಾಗೂ ಕಾಫಿ ಕ್ಯೂರಿಂಗ್‍ನಲ್ಲಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
10ನೇ ತರಗತಿಯನ್ನು ಪೂರ್ಣಗೊಳಿಸಿ 11ನೇ ತರಗತಿಯಲ್ಲಿ (ಪ್ರಥಮ ಪಿಯುಸಿ) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಡಿಪೆÇ್ಲಮಾ (ಪ್ರಥಮ ವರ್ಷ) ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಸೆಪ್ಟಂಬರ್ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ತಮ್ಮ ಸಂಬಂಧಿತ ಪ್ರದೇಶದಲ್ಲಿರುವ ಕಾಫಿ ಮಂಡಳಿ ಕಚೇರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ವಿವರ ಹಾಗೂ ಮಾರ್ಗದರ್ಶನಕ್ಕಾಗಿ ತಮ್ಮ ಸಂಬಂಧಿತ ಪ್ರದೇಶದಲ್ಲಿರುವ ಕಾಫಿ ಮಂಡಳಿ ಕಚೇರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.


