ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಒಟ್ಟು 266 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 226 ಗ್ರಾ.ಪಂ.ಗಳಿದ್ದು, ಪ್ರತೀ ಗ್ರಾ.ಪಂ. ವ್ಯಾಪ್ತಿಗೆ ತಲಾ ಒಂದರಂತೆ 226 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತದೆ. ಚಿಕ್ಕಮಗಳೂರು ನಗರಸಭೆಯಲ್ಲಿ 15, ತರೀಕೆರೆ ಪುರಸಭೆಯಲ್ಲಿ 6, ಬೀರೂರು ಪುರಸಭೆಯಲ್ಲಿ 4, ಕಡೂರು ಪುರಸಭೆಯಲ್ಲಿ 6, ಎನ್.ಆರ್.ಪುರ ಪಟ್ಟಣ ಪಂಚಾಯಿತಿಯಲ್ಲಿ 2, ಅಜ್ಜಂಪುರ ಪಟ್ಟಣ ಪಂಚಾಯಿತಿಯಲ್ಲಿ 3. ಮೂಡಿಗೆರೆ ಪಟ್ಟಣ ಪಂಚಾಯಿತಿಯಲ್ಲಿ 2. ಶೃಂಗೇರಿ ಪಟ್ಟಣ ಪಂಚಾಯಿತಿಯಲ್ಲಿ 1, ಕೊಪ್ಪ ಪಟ್ಟಣ ಪಂಚಾಯಿತಿಯಲ್ಲಿ 1, ಹೀಗೆ ಒಟ್ಟು 40 ಸಂಘಗಳನ್ನು ನಗರ ಪ್ರದೇಶದಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಸ್ಥಾಪಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರತೀ ಸಂಘಕ್ಕೆ ಕನಿಷ್ಠ 100 ಸದಸ್ಯರನ್ನು ಹೊಂದಬೇಕಾಗಿದ್ದು, ಜಿಲ್ಲೆಯಲ್ಲಿ ಕನಿಷ್ಠ 26,600 ಯುವಜನರ ಸದಸ್ಯತ್ವ ನೋಂದಣಿ ಮಾಡುವ ಗುರಿ ಹೊಂದಲಾಗಿದೆ. ಸಂಘಗಳ ಸ್ಥಾಪನೆಯ ಜೊತೆಗೆ ಸದಸ್ಯತ್ವ ನೋಂದಣಿ ಅಭಿಯಾನ ಆರಂಭವಾಗಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆವೈಎಸ್‍ಪೆÇೀರ್ಟಲ್ ಅಥವಾ ಮೊಬೈಲ್ ಆ್ಯಪ್ ಮೂಲಕ ಅಥವಾ ಗ್ರಾ.ಪಂ. ಹಾಗೂ ನಗರ ಪ್ರದೇಶಗಳಲ್ಲಿ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ನಾಗರಿಕ ಸೇವಾ ಕೇಂದ್ರಗಳ ಸಹಾಯದಿಂದ ಅಥವಾ bರಿಥಿs.ಞಚಿಡಿಟಿಚಿಣಚಿಞಚಿ.gov.iಟಿ ಲಿಂಕ್ ಮುಖಾಂತರ ನೋಂದಣಿ ಮಾಡಿಕೊಳ್ಳಲು ಕೋರಿದೆ. ಆಗಸ್ಟ್ 20ರ ಅಂತ್ಯದ ವೇಳೆಗೆ ನಗರ ಪ್ರದೇಶದಲ್ಲಿ 150 ಹಾಗೂ ಗ್ರಾಮೀಣ ಪ್ರದೇಶದಲ್ಲಿ 2960 ಸೇರಿದಂತೆ ಒಟ್ಟು 3110 ಸದಸ್ಯರು ನೋಂದಣಿಯಾಗಿದ್ದಾರೆ.
16 ರಿಂದ 35 ವರ್ಷದೊಳಗಿನ ಯುವಜನರು ಸಂಘದ ಸದಸ್ಯತ್ವ ಪಡೆಯಲು ಅರ್ಹರಾಗಿದ್ದು, ಆಧಾರ್ ಆಧಾರಿತ ನೋಂದಣಿ ಕಡ್ಡಾಯವಾಗಿದೆ. ಪ್ರತಿ ಸದಸ್ಯರಿಗೆ 10 ರೂ. ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ. ಸದಸ್ಯತ್ವಕ್ಕಾಗಿ ಪೆÇೀರ್ಟಲ್‍ನಲ್ಲಿ ನೋಂದಣಿ ಮಾಡಿಕೊಳ್ಳಲು ಕೋರಿದೆ.
ಪ್ರತೀ ಸಂಘವು 15 ಜನ ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಿ ಇದರಲ್ಲಿ ಎಸ್.ಸಿ/ಎಸ್.ಟಿ: ಮೂವರು ಸದಸ್ಯರು ಅವರಲ್ಲೊಬ್ಬರು ಮಹಿಳೆ ಹಾಗೂ ಒ.ಬಿ.ಸಿ+ಅಲ್ಪಸಂಖ್ಯಾತರು ನಾಲ್ವರು ಸದಸ್ಯರು, ಅವರಲ್ಲೊಬ್ಬರು ಮಹಿಳೆ, ಹಾಗೂ ಸಾಮಾನ್ಯ 8 ಸದಸ್ಯರು ಅವರಲ್ಲಿ ಮೂವರು ಮಹಿಳೆಯರನ್ನು ಹೊಂದಿರಬೇಕು. ಕಾರ್ಯಕಾರಿ ಸಮಿತಿಯ ಅವಧಿ 2 ವರ್ಷಗಳಾಗಿವೆÉ.
ಪ್ರತೀ ಭಾರತ್ ಜೋಡೋ ಯುವ ಸಂಘಕ್ಕೆ ವಾರ್ಷಿಕ 10 ಲಕ್ಷ ರೂ. ಅನುದಾನ ನೀಡಲಾಗುತ್ತದೆ. ಈ ಅನುದಾನದಲ್ಲಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ರಾಷ್ಟ್ರೀಯ ಹಬ್ಬಗಳನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಆಚರಿಸುವುದು ಕಡ್ಡಾಯವಾಗಿದೆ.
ಪ್ರತೀ ಸಂಘವು ಮಾಸಿಕ ಸಭೆ ನಡೆಸಿ ವಾರ್ಷಿಕ ಚಟುವಟಿಕೆಗಳ ಕ್ಯಾಲೆಂಡರ್ ಸಿದ್ಧಪಡಿಸಬೇಕು. ನಡೆಸಿದ ಕಾರ್ಯಕ್ರಮಗಳ ವರದಿಯನ್ನು ಜಿಯೋ-ಟ್ಯಾಗ್ ಛಾಯಾಚಿತ್ರಗಳೊಂದಿಗೆ ಬಿಜೆವೈಎಸ್ ತಂತ್ರಾಂಶದಲ್ಲಿ ಅಪ್ ಲೋಡ್ ಮಾಡಬೇಕು. ಜಿಲ್ಲೆಯಲ್ಲಿ 266 ಸಂಘಗಳ ನೋಂದಣಿ ಪ್ರಕ್ರಿಯೆಯನ್ನು ಆಗಸ್ಟ್ 30ರೊಳಗೆ ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.


