August 22, 2026
;
kunnlli

 

 

ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ನೂತನ ಹಂಗಾಮಿ ಅಧ್ಯಕ್ಷರಾಗಿ ನೇಮಕವಾಗಿರುವ ಕೆ.ಎ.ರವಿ ಕುನ್ನಹಳ್ಳಿ ಅವರಿಗೆ ಸ್ವಗ್ರಾಮ ಕುನ್ನಹಳ್ಳಿಯಲ್ಲಿ ಗ್ರಾಮಸ್ಥರು ಅಭಿಮಾನದ ಸನ್ಮಾನ ನೀಡಿ ಗೌರವಿಸಿದರು.

ಗುರುವಾರ ಕುನ್ನಹಳ್ಳಿ ಸಮುದಾಯ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಕೆ.ಎ. ರವಿ ದಂಪತಿಗಳನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ವಿವಿಧ ಸಂಘ ಸಂಸ್ಥೆಗಳ ಮತ್ತು ರಾಜಕೀಯ ಪಕ್ಷಗಳ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದು, ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ.ಎ.ರವಿಯವರು ; ಗ್ರಾಮದ ಜನರು ತಮ್ಮ ಮೇಲೆ ತೋರಿರುವ ಪ್ರೀತಿಗೆ ಧನ್ಯವಾದ ಸಲ್ಲಿಸಿದರು. ತನಗೆ ಸಿಕ್ಕಿರುವ ಹೊಸ ಜವಾಬ್ದಾರಿಯಲ್ಲಿ ಜನರ ಸೇವೆಗೆ ಮತ್ತು ಕಾಂಗ್ರೇಸ್ ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಿ ಗ್ರಾಮದ ಗೌರವವನ್ನು ಕಾಪಾಡುವುದಾಗಿ ತಿಳಿಸಿದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;