August 25, 2026
;
24Mudigere3A

 

 

ರಕ್ತದಾನ ಎಂದರೆ ಕೇವಲ ರಕ್ತ ನೀಡುವುದಲ್ಲ; ಅದು ಒಬ್ಬರ ಜೀವ ಉಳಿಸುವ ಮಹತ್ತರ ಸೇವೆ. ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ, ರಕ್ತಹೀನತೆ ಸೇರಿದಂತೆ ಹಲವು ಸಂದರ್ಭಗಳಲ್ಲಿ ಸಮಯಕ್ಕೆ ಸರಿಯಾಗಿ ರಕ್ತ ದೊರೆಯುವುದು ಜೀವ ರಕ್ಷಕವಾಗುತ್ತದೆ ಎಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಹೇಳಿದರು.

ಅವರು ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಂದ ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಕ್ತಕ್ಕೆ ಪರ್ಯಾಯವಾಗಿ ಯಾವುದೇ ಕೃತಕ ವಸ್ತುವನ್ನು ಬಳಸಲು ಸಾಧ್ಯವಿಲ್ಲ. ಆದ್ದರಿಂದ ಆರೋಗ್ಯವಂತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಬೇಕೆಂದು ಹೇಳಿದರು.

ಬ್ರಹ್ಮಕುಮಾರಿ ಕೇಂದ್ರದ ಜಿಲ್ಲಾ ನಿರ್ದೇಶಕಿ ಡಾ.ಬಿ.ಕೆ.ಭಾಗ್ಯ ಮಾತನಾಡಿ, ಈ ಜಗತ್ತಿನಲ್ಲಿ ಪ್ರೀತಿ, ಸಹಬಾಳ್ವೆ, ಸಾಮರಸ್ಯದ ವಾತಾವರಣ ನಿರ್ಮಾಣವಾಗಬೇಕಿದೆ. ಜಾತಿ, ಧರ್ಮ, ಭಾಷೆ ಎಂಬ ಯಾವುದೇ ಭೇದವಿಲ್ಲದೆ ಎಲ್ಲರೂ ಮಾನವೀಯತೆಯ ದೃಷ್ಟಿಯಿಂದ ರಕ್ತದಾನಕ್ಕೆ ಮುಂದೆ ಬರಬೇಕೆಂದು ಹೇಳಿದರು.

ಸೀನಿಯರ್ಸ್ ಛೇಂಬರ್ ಇಂಷರ್‍ನ್ಯಾಷಿನಲ್ ಅಧ್ಯಕ್ಷ ಅಮೀನ್ ಅಹಮ್ಮದ್, ಉಪಾಧ್ಯಕ್ಷ ಬಿ.ಎನ್. ಮನ್‍ಮೋಹನ್, ರೆಡ್‍ಕ್ರಾಸ್ ಸಂಸ್ಥೆ ಅಧ್ಯಕ್ಷ ಪ್ರವೀಣ್ ಬಣಕಲ್, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸುದೇವ್ ಗುತ್ತಿ, ಲೀಸಾ ಫೌಂಡೇಷನ್ ಅಧ್ಯಕ್ಷೆ ಸಂಗೀತಾ ಪ್ರಸಾಧ್, ಕಸಾಪ ಅಧ್ಯಕ್ಷ ಡಿ.ಕೆ.ಲಕ್ಷ್ಮಣ್‍ಗೌಡ, ಪತ್ರಕರ್ತ ಪ್ರಸನ್ನ ಗೌಡಹಳ್ಳಿ, ಬ್ರಹ್ಮಕುಮಾರಿ ಸಂಚಾಲಿಕಿ ದೇವಿಕಾ, ಚಿಕ್ಕಮಗಳೂರು ಹೋಲಿಕ್ರಾಸ್ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಮತ್ತಿತರರಿದ್ದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;