August 27, 2026
;
suddi-1 (4)

 

 

ಅಂಜುಮಾನ್ ಈ-ಇಸ್ಲಾಮಿಯಾ ನೇತೃತ್ವದಲ್ಲಿ ಪ್ರವಾದಿ ಹಜರತ್ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸ್ಮರಣಾರ್ಥವಾಗಿ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಬುಧವಾರ ಮೂಡಿಗೆರೆ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ನಡೆಸುವ ಮೂಲಕ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಅಂಜುಮಾನ್ ಈ-ಇಸ್ಲಾಮಿಯಾ ಅಧ್ಯಕ್ಷ ಎಂ.ಆರ್.ಜಿಯಾವುಲ್ಲ ಮಾತನಾಡಿ, ಪ್ರವಾದಿ ಪೈಗಂಬರ್ ಅವರು ಮಾನವೀಯತೆ, ಪ್ರೀತಿ, ಕರುಣೆ, ಶಾಂತಿ, ಸಹೋದರತ್ವ ಮತ್ತು ಸೌಹಾರ್ದತೆಯ ಸಂದೇಶವನ್ನು ಜಗತ್ತಿಗೆ ಸಾರಿದ ಮಹಾನ್ ಪುರುಷರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಜಾತಿ, ಧರ್ಮ, ಭಾಷೆ ಎಂಬ ಭೇದವಿಲ್ಲದೆ ಎಲ್ಲರೂ ಪರಸ್ಪರ ಗೌರವದಿಂದ ಹಾಗೂ ಸಹೋದರತ್ವದಿಂದ ಬದುಕಬೇಕೆಂಬುದು ಈ ಹಬ್ಬದ ಪ್ರಮುಖ ಸಂದೇಶವಾಗಿದೆ. ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸಬೇಕಾದರೆ ಪ್ರತಿಯೊಬ್ಬರೂ ಎಲ್ಲಾ ಧರ್ಮ ಮತ್ತು ಸಂಸ್ಕøತಿಯನ್ನು ಗೌರವಿಸಬೇಕು. ಹಬ್ಬಗಳು ಕೇವಲ ಆಚರಣೆಗೆ ಸೀಮಿತವಾಗದೆ ಸಮಾಜದಲ್ಲಿ ಪ್ರೀತಿ ಮತ್ತು ಒಗ್ಗಟ್ಟು ಬೆಸೆಯುವ ಸೇತುವೆಯಾಗಬೇಕೆಂದು ಹೇಳಿದರು.

ಈದ್ ಮಿಲಾದ್ ಅಂಗವಾಗಿ ತಾಲೂಕಿನಲ್ಲಿರುವ ಮಸೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಬುಧವಾರ ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿ, ಪ್ರವಾದಿಯವರ ಜೀವನ, ಮಾನವೀಯತೆ, ಶಾಂತಿ, ಸಹೋದರತ್ವ ಹಾಗೂ ಸೌಹಾರ್ದತೆಯ ಸಂದೇಶಗಳನ್ನು ಸ್ಮರಿಸಿದರು. ಮೆರವಣಿಗೆ ಸಾಗಿದ ಮಾರ್ಗದಲ್ಲಿ ಸಾರ್ವಜನಿಕರು ಶುಭಾಶಯಗಳನ್ನು ವಿನಿಮಯ ಮಾಡಿಕೊಂಡಿದ್ದಲ್ಲದೇ ಸಾರ್ವಜನಿಕರಿಗೆ ಸಿಹಿ ಹಂಚಿದರು. ಮೆರವಣಿಗೆಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಪೆÇಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಮೆರವಣಿಗೆಯಲ್ಲಿ  ಹಿರಿಯರು, ಯುವಕರು, ಮಕ್ಕಳು  ಭಾಗವಹಿಸಿದ್ದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;