August 27, 2026
;
26Mudigere2A

 

 

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ವತಿಯಿಂದ ಸೆಪ್ಟಂಬರ್ 4ರಂದು ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ನಡೆಯಲಿರುವ ಎರಡನೇ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಆಗಿರುವ ಲೇಖಕಿ ಶ್ರೀಮತಿ ಭಾಗ್ಯ ಲಕ್ಷ್ಮಣ್‍ಗೌಡ ಅವರನ್ನ ಇತ್ತೀಚೆಗೆ ತಾಲೂಕಿನ ಚಕ್ಕುಡಿಗೆ ಗ್ರಾಮದ ಅವರ ನಿವಾಸದಲ್ಲಿ  ಕಸಾಪ ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಕಸಾಪ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಮಂಚೇಗೌಡ ಮಾತನಾಡಿ, ಜಿಲ್ಲೆಯಲ್ಲಿ  ಮಹಿಳಾ ಘಟಕ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಮಹಿಳೆಯರಲ್ಲಿ ಇರುವ ಸಾಹಿತ್ಯಾಸಕ್ತಿಯನ್ನು  ಸಮಾಜದ ಮುನ್ನೆಲೆಗೆ ತರುವ ದೃಷ್ಟಿಯಿಂದ ಜಿಲ್ಲಾ ಮಟ್ಟದ ಮಹಿಳಾ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನ ಪಟ್ಟಣದ  ಅಡ್ಯಂತಾಯ ರಂಗ ಮಂದಿರದಲ್ಲಿ ನಡೆಯಲಿದ್ದು,  ಹಲವು ವರ್ಷದಿಂದ ಸಾಹಿತ್ಯ ಕ್ಷೇತ್ರದಲ್ಲಿ  ತೊಡಗಿಸಿಕೊಂಡಿರುವ  ನಮ್ಮ ತಾಲೂಕಿನವರೇ ಆಗಿರುವ ಭಾಗ್ಯಲಕ್ಷ್ಮಣ್‍ಗೌಡ ಸಮ್ಮೇಳನದ ಅಧ್ಯಕ್ಷರಾಗಿರುವುದು ಸಂತಸ ತಂದಿದೆ. ಸಮ್ಮೇಳನದ ಯಶಸ್ವಿಗೆ ಎಲ್ಲಾ ಸಾಹಿತ್ಯ ಆಸಕ್ತರ ಮತ್ತು ತಾಲೂಕಿನ ಜನತೆಯ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ಮಹಿಳಾ ಘಟಕದ ವತಿಯಿಂದ ಇದು ಎರಡನೇ ಸಮ್ಮೇಳನವಾಗಿದೆ. ಈ ಸಮ್ಮೇಳನದ ಉದ್ಘಾಟನೆಯನ್ನು ಮೈಸೂರಿನ ಉಪನ್ಯಾಸಕಿ ಡಾ.ಲತಾ ರಾಜಶೇಖರ್ ನೆರವೇರಿಸಲಿದ್ದು, ಸಮಾರೋಪದಲ್ಲಿ ಅಂಕಣಕಾರ ದೀಪ ಹಿರೇಗುತ್ತಿ ಭಾಗವಹಿಸಲಿದ್ದಾರೆ. ಸ್ತ್ರಿ ಎಂದರೆ ಅಷ್ಟೇ  ಸಾಕೆ ಎನ್ನುವ ಗೋಷ್ಠಿಯನ್ನು ಜಿ.ಪಂ. ಸಿಇಒ ಕೀರ್ತನ  ಉದ್ಘಾಟಿಸಲಿದ್ದಾರೆ. ಅಲ್ಲದೇ ದಕ್ಷಿಣ ಭಾರತದ ಖ್ಯಾತ ಹಿನ್ನಲೆ ಗಾಯಕಿ ಎಸ್ ಜಾನಕಿ ಅವರಿಗೆ ನುಡಿ ನಮಾನ ಕಾರ್ಯಕ್ರಮ,  ಜಿಲ್ಲೆಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿರುವ ಎಲ್ಲಾ ತಾಲೂಕಿನ ಇಬ್ಬರನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ಹಾಗೂ ಎಲ್ಲಾ ತಾಲೂಕು ಅಧ್ಯಕ್ಷರಿಗೆ  ಕನ್ನಡ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಸಾಪ ತಾಲೂಕು ಅಧ್ಯಕ್ಷ  ಡಿ.ಕೆ.ಲಕ್ಷ್ಮಣ್‍ಗೌಡ, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ರೇಖಾ ರವಿರಾಜ್, ಲೇಖಕರ ಬಳಗದ ತಾಲೂಕು ಅಧ್ಯಕ್ಷೆ ಪ್ರೇಮ ಪುಣ್ಯಮೂರ್ತಿ, ಪವಿತ್ರ ರತೀಶ್,  ಜ್ಯೋತಿ ವೆಂಕಟೇಶ್ ಮತ್ತಿತರರಿದ್ದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;