August 27, 2026
;
lions 1

 

 

ಲಯನ್ಸ್ ಕ್ಲಬ್ ಬಾಳೆಹೊನ್ನೂರು ಹಾಗೂ ಆರೋಗ್ಯ ಕೇಂದ್ರ, ಬಾಳೆಹೊನ್ನೂರು ಇವರ ಸಂಯುಕ್ತ ಆಶ್ರಯದಲ್ಲಿ ಬಾಳೆಹೊನ್ನೂರು ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ರಕ್ತದ ಗುಂಪು ಪರೀಕ್ಷೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಕೆ. ಎಂ. ಯೋಗೇಶ್ ಗೌಡ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆರೋಗ್ಯ, ಸ್ವಚ್ಛತೆ, ಸಮಯಪಾಲನೆ, ಶಿಸ್ತು ಹಾಗೂ ಉತ್ತಮ ಸಂಸ್ಕಾರಗಳಿಗೆ ಹೆಚ್ಚಿನ ಮಹತ್ವ ನೀಡಬೇಕು. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಮಿತಿಗೊಳಿಸಿ, ತಮ್ಮ ಅಮೂಲ್ಯ ಸಮಯವನ್ನು ಓದು ಮತ್ತು ಜ್ಞಾನಾರ್ಜನೆಗೆ ಬಳಸಿಕೊಂಡು ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಎಂದು ಕರೆ ನೀಡಿದರು.

ಲಯನ್ಸ್ ಕ್ಲಬ್ ಸದಾ ವಿದ್ಯಾರ್ಥಿಗಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಬೆಳವಣಿಗೆಗೆ ಅಗತ್ಯವಾದ ಸಹಕಾರ ನೀಡಲು ಪ್ರಯತ್ನಿಸುತ್ತದೆ ಎಂದು ಅವರು ತಿಳಿಸಿದರು.

ಹಿರಿಯ ವೈದ್ಯಾಧಿಕಾರಿ ಡಾ. ಪ್ರವೀಣ್ ಕುಮಾರ್ ಅವರು ರಕ್ತದ ಗುಂಪು ಪರೀಕ್ಷೆಯ ಮಹತ್ವ ಹಾಗೂ ಆರೋಗ್ಯದ ಬಗ್ಗೆ ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸಿದರು.

ಹಿರಿಯ ಆರೋಗ್ಯ ನಿರೀಕ್ಷಕರಾದ ಭಗವಾನ್ ಅವರು ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಪದಾಧಿಕಾರಿಗಳಾದ ಎಂ. ಡಿ. ಶಿವರಾಮ್, ಎಂ. ವಿ. ಶ್ರೀನಿವಾಸ್, ನಾರಾಯಣ್ ಮೆಲ್ಪಾಲ್, ಶರತ್, ಶ್ರೀನಿವಾಸ್, ವಿಜಯ್ ಹಾಗೂ ರವೀಂದ್ರ, ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಆಶಾ ಉಪಸ್ಥಿತರಿದ್ದರು.

ತುಪ್ಪುರು ಮಂಜುನಾಥ್ ಕಾರ್ಯಕ್ರಮವನ್ನು ನಿರೂಪಿಸಿದರು. ಕೃಷ್ಣಮೂರ್ತಿ ಅದ್ದೋಣಿ ಸ್ವಾಗತಿಸಿದರು. ಮಧುಕುಮಾರ್ ವಂದನಾರ್ಪಣೆ ಮಾಡಿದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;